ಮಂಗಳೂರು: ಹಿರಿಯ ಸಾಹಿತಿ ಡಾ.ನಾ ಡಿಸೋಜ (87), ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ ಇಬ್ಬರು ಪುತ್ರರು, ಒಬ್ಬ ಪುತ್ರಿಯನ್ನು ಅಗಲಿದ್ದಾರೆ.
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದ ಅವರು, ಮಡಿಕೇರಿಯಲ್ಲಿ ನಡೆದ 80 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಅವರು ಇದುವರೆಗೆ 37 ಕಾದಂಬರಿಗಳು, ನಾಲ್ಕು ನಾಟಕಗಳು, ಇಪ್ಪತ್ತೆಂಟು ಮಕ್ಕಳ ಕೃತಿಗಳು ಸೇರಿದಂತೆ ನೂರಾರು ಕತೆಗಳನ್ನು ರಚಿಸಿದ್ದಾರೆ.
ಇವರ ಕಾದಂಬರಿ ‘ಕಾಡಿನ ಬೆಂಕಿ’ ಹಾಗೂ ‘ದ್ವೀಪ’ ಚಲನಚಿತ್ರಗಳಾಗಿ ‘ರಜತಕಮಲ’ ಹಾಗೂ ‘ಸ್ವರ್ಣಕಮಲ’ ಪ್ರಶಸ್ತಿಗಳನ್ನು ಗಳಿಸಿವೆ. ‘ಬಳುವಳಿ’ ಕಾದಂಬರಿ ಕೊಂಕಣಿಯಲ್ಲಿ ಚಲನಚಿತ್ರವಾಗಿದೆ. ‘ಸಾರ್ಕ್’ ದೇಶಗಳ ಸಾಹಿತಿಗಳ ಸಮ್ಮೇಳನದಲ್ಲಿ ಸ್ವಂತ ಕಥಾವಾಚನ ಮಾಡಿದ್ದಾರೆ.
ಇವರ ‘ಮುಳುಗಡೆಯ ಊರಿಗೆ ಬಂದವರು’ ಕಿರು ಕಾದಂಬರಿಗೆ 2011ರ ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪುರಸ್ಕಾರ ಸಂದಿದೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಗುಲ್ವಾಡಿ ವೆಂಕಟರಾವ್ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಂಗಳೂರು ಸಂದೇಶ ಪ್ರಶಸ್ತಿ, ನವದೆಹಲಿ ಕಥಾ ಪ್ರಶಸ್ತಿ, ಪುತ್ತೂರು ನಿರಂಜನ ಸಾಹಿತ್ಯ ಪ್ರಶಸ್ತಿ ಮುಂತಾದವುಗಳಿಂದ ಇವರು ಪುರಸ್ಕೃತರಾಗಿದ್ದಾರೆ.




