ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶ್ರೀ ರಾಮಮಂದಿರದಲ್ಲಿ ಕೇಂದ್ರ ಲೋಕಸಭಾ ಕ್ಷೇತ್ರದಿಂದ 4ನೇ ಬಾರಿಗೆ ಆಯ್ಕೆಯಾದ ಪಿ.ಸಿ.ಮೋಹನ್ ಅವರ ವಿಜಯೋತ್ಸವ ಕಾರ್ಯಕ್ರಮವನ್ನು ರಾಜಾಜಿನಗರ ಮಂಡಲ ಬಿಜೆಪಿ ವತಿಯಿಂದ ಆಚರಿಸಲಾಯಿತು.
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
ಮೇರುನಟ ಡಾ.ರಾಜ್ ಕುಮಾರ್ ಪ್ರತಿಮೆಗೆ ಮಾಲಾರ್ಪಣೆಯನ್ನು ಮಾಜಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ರವರು ಮಾಡಿ ಮಾತನಾಡಿ, ಬೆಂಗಳೂರು ನಗರದಲ್ಲಿ ಕೇಂದ್ರ, ಉತ್ತರ ಮತ್ತು ದಕ್ಷಿಣ, ಗ್ರಾಮಾಂತರ ಪ್ರದೇಶ ನಾಲ್ಕು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಮತದಾರರು ಬಿಜೆಪಿ ಪಕ್ಷ ಮತ್ತು ಪ್ರಧಾನಿ ನರೇಂದ್ರಮೋದಿರವರ ಮೇಲೆ ಇಟ್ಟಿರುವ ವಿಶ್ವಾಸದಿಂದ ಗೆಲುವು ಸಾಧ್ಯವಾಗಿದೆ. ಮತದಾರರ ಋಣ ತೀರಿಸಲು ಲೋಕಸಭಾ ಸದಸ್ಯರ ಜೊತೆಗೂಡಿ ಶ್ರಮಿಸಲಾಗುವುದು ಎಂದರು.
ಕಾಂಗ್ರೆಸ್ ಪಕ್ಷ ಸಚಿವರಿಬ್ಬರು ಬಿಜೆಪಿಗೆ ಒಂದಂಕಿ ಬರುವುದಿಲ್ಲ ಎಂದು ಹೇಳಿದ್ದರು, ಆದರೆ ಮತದಾರರ ತೀರ್ಮಾನ ಕೊಟ್ಟಿದ್ದಾನೆ. 10 ವರ್ಷದ ಪ್ರಧಾನಿ ನರೇಂದ್ರಮೋದಿರವರ ಆಡಳಿತದಿಂದ ಉತ್ತಮ ಫಲಿತಾಂಶ ಬರಬೇಕಾಗಿತ್ತು. ಆದರೆ ಫಲಿತಾಂಶದಲ್ಲಿ ಸ್ವಲ್ಪ ಸಿಹಿ ಕಡಿಮೆಯಾಗಿದೆ ಎಂದರು.
ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಗೆಲುವಿನಿಂದ ಜವಾಬ್ದಾರಿ ಹೆಚ್ಚಾಗಿದೆ, ಇನ್ನು ಹೆಚ್ಚು ಶ್ರಮವಹಿಸಿ ಕೆಲಸ ಮಾಡಬೇಕು. ಮುಂದಿನ ವಾರ ಕಾರ್ಯಕರ್ತರಿಗೆ ಕೃತಜ್ಞತೆ ಸಮರ್ಪಣಾ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದರು.
ಕೇಂದ್ರ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಘವೇಂದ್ರರಾವ್, ಮಂಡಲ ಬಿಜೆಪಿ ಅಧ್ಯಕ್ಷ ಸುದರ್ಶನ್, ಸಾವಿತ್ರಿ ಸುರೇಶ್ ಕುಮಾರ್, ಮಾಜಿ ಉಪಮಹಾಪೌರರಾದ ರಂಗಣ್ಣ, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಎಂ.ಮುನಿರಾಜು, ರಾಜಣ್ಣ, ಪುಷ್ಪಲತಾ ರಾಜಣ್ಣ, ಹೆಚ್.ಆರ್.ಕೃಷ್ಣಪ್ಪ, ವಿಜಯಕುಮಾರ್, ದೀಪ ನಾಗೇಶ್, ಪ್ರತಿಮಾ ಕಾರ್ಯಕರ್ತರ ಜೊತೆಯಲ್ಲಿ ಸಾರ್ವಜನಿಕರಿಗೆ ಸಿಹಿ ವಿತರಿಸಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
ಬಿಜೆಪಿ ಮುಖಂಡರಾದ ಬಿ.ಎನ್.ಶ್ರೀನಿವಾಸ್, ಕೃಷ್ಣಮೂರ್ತಿ, ಕಿರಣ್, ಗಿರೀಶ್ ಗೌಡ, ರಾಕೇಶ್, ಮೋಹನ್ ರಾಜ್, ಅಮಿತ್ ಜೈನ್, ಗಾಂಧಿ, ವೆಂಕಟೇಶ್, ಯುವ ಬಿಜೆಪಿ ಮತ್ತು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.



