ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ಪ್ರಮುಖ ಸಾಕ್ಷಿಯಾಗಿರುವ ತನ್ನ 2 ಸಾವಿರ ವಿಡಿಯೋ ಹಾಗೂ 15 ಸಾವಿರ ಫೋಟೊಗಳಿರುವ ಮೊಬೈಲ್ ಅನ್ನು ವಾಪಸ್ ಕೊಡುವಂತೆ ಹಾಗೂ ಪ್ರಕರಣದಿಂದ ತನ್ನನ್ನು ಖುಲಾಸೆ ಮಾಡುವಂತೆ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮೊಬೈಲ್ ಕೊಡಲಾಗುವುದಿಲ್ಲ. ಆದರೆ, ನಿಮ್ಮ ವಿಡಿಯೋ ಹಾಗೂ ಫೋಟೋಗಳನ್ನು ಕೋರ್ಟ್ನಲ್ಲಿಯೇ ವೀಕ್ಷಣೆ ಮಾಡುವುದಕ್ಕೆ ಅವಕಾಶ ನೀಡಲಾಗುವುದು ಎಂದಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣನನ್ನು ಶುಕ್ರವಾರ ಬೆಳಗ್ಗೆ 11 ಗಂಟೆಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅತ್ಯಾಚಾರ ಪ್ರಕರಣ ಸಂಬಂಧ ಟ್ರಯಲ್ ಆರಂಭ ಮಾಡಿದ ನ್ಯಾಯಾಲಯದ ಮುಂದೆ ಪ್ರಜ್ವಲ್ ಹಾಜರಾದರೂ, ಎಸ್ಪಿಪಿ ಹಾಜರಾಗಿರಲಿಲ್ಲ. ಹೀಗಾಗಿ ಕೆಲಕಾಲ ವಿಚಾರಣೆ ಮುಂದೂಡಿದ್ದ ನ್ಯಾಯಾಲಯದ ಮುಂದೆ ತನಗೆ ವಿಡಿಯೋ ಕಾನ್ಫರೆನ್ಸ್ ವಿಚಾರಣೆಗೆ ಹಾಜರಾಗಲು ಅವಕಾಶ ನೀಡುವಂತೆ ಮನವಿ ಮಾಡಿದರು. ಆದರೆ, ಇದನ್ನ ನಿರಾಕರಿಸಿದ ಕೋರ್ಟ್ ಖುದ್ದು ಹಾಜರಾತಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಪರಪ್ಪನ ಆಗ್ರಹಾರ ಜೈಲಿಂದ ಪ್ರಜ್ವಲ್ನನ್ನು ಪೊಲೀಸರು ಕೋರ್ಟ್ಗೆ ಕರೆತಂದಿದ್ದಾರೆ. ಪ್ರಜ್ವಲ್ ರೇವಣ್ಣ ತನ್ನ ಮೇಲಿನ ಅತ್ಯಾಚಾರ ಪ್ರಕರಣದ 2,000 ವೀಡಿಯೋ, 15000 ಪೋಟೋ ಇರುವ ಮೊಬೈಲ್ ನೀಡುವಂತೆ ಅರ್ಜಿ ಸಲ್ಲಿಸಿದ್ದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ.ಸಂತೋಷ್ ಗಜಾನನ ಭಟ್, ನಿಮಗೆ ವಿಡಿಯೋ ಹಾಗೂ ಪೋಟೋ ನೀಡಲು ಸಾಧ್ಯವಿಲ್ಲ. ಈ ಕೇಸಿನ ಬಗ್ಗೆ ಹೈಕೋರ್ಟ್ನಲ್ಲಿಯೂ ಕೂಡ ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ಆದರೆ, ಪ್ರಜ್ವಲ್ ಕೋರಿಕೆ ಮೇರೆಗೆ ಆರೋಪಿಗೆ ವಿಡಿಯೋ ಹಾಗೂ ಪೋಟೋ ತೋರಿಸಲು ಸೂಚನೆ ನೀಡಿದರು. ಇಂದೇ ಕೋರ್ಟ್ನಲ್ಲಿಯೇ ನಿಮಗೆ ಏನ್ ಬೇಕೋ ನೋಡಿಕೊಳ್ಳಿ ಎಂದರು.
ಪ್ರಜ್ವಲ್ ಹಾಗೂ ವಕೀಲರಿಗೆ ಬೇಕಾದ ಸಾಕ್ಷಿ ವೀಕ್ಷಣೆಗೆ ಅವಕಾಶ ನೀಡಲಾಯಿತು. ಆದರೆ, ಇಂದು ಬೇಡ ವಿಚಾರಣೆ ಸೋಮವಾರಕ್ಕೆ ಮುಂದೂಡಿ ಎಂದು ಪ್ರಜ್ವಲ್ ಪರ ವಕೀಲರ ಮನವಿ ಮಾಡಿದರು. ಆಗ ಕೋರ್ಟ್ನಿಂದ ಪ್ರಜ್ವಲ್ ರೇವಣ್ಣ ಪರ ವಕೀಲರ ಮನವಿ ತಿರಸ್ಕರಿಸಲಾಯಿತು.
ಕೋರ್ಟ್ನಲ್ಲಿ ತನ್ನದೇ ಕೇಸಿನ ವಿಡಿಯೋ, ಫೋಟೋ ಸೇರಿದಂತೆ ತಾಂತ್ರಿಕ ಸಾಕ್ಷ್ಯಗಳ ವೀಕ್ಷಣೆಗೆ ಅವಕಾಶ ಕೊಟ್ಟ ಕೋರ್ಟ್ ಮುಂದೆ, ಪ್ರಜ್ವಲ್ ಪರ ವಕೀಲರು ಶುಕ್ರವಾರ ಬೇಡ ಶನಿವಾರವಾದರೂ ವೀಕ್ಷಣೆಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು. ಹೀಗಾಗಿ, ಶನಿವಾರ ಕೋರ್ಟ್ನಲ್ಲಿಯೇ ತನ್ನ ಪೋಟೋ ಹಾಗೂ ವೀಡಿಯೋ ನೋಡಲು ಪ್ರಜ್ವಲ್ಗೆ ಕೋರ್ಟ್ನಿಂದ ಅವಕಾಶ ನೀಡಲಾಗಿದೆ.
ಟೆಕ್ನಿಕಲ್ ಎಕ್ಸಪರ್ಟ್ ಸಹಾಯದಿಂದ ಪೋಟೋ, ವಿಡಿಯೋ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಇನ್ನು ಪ್ರಜ್ವಲ್ ರೇವಣ್ಣ ತಮ್ಮ ವಿರುದ್ಧದ ಅತ್ಯಾಚಾರ ಪ್ರಕರಣದ ಆರೋಪವನ್ನು ಖುಲಾಸೆ ಮಾಡುವಂತೆ ಸಲ್ಲಿಕೆ ಮಾಡಿದ್ದ ಅರ್ಜಿ ವಿಚಾರಣೆ ಮಾಡಿದ ಕೋರ್ಟ್ ಮುಂದೆ, ಇದೊಂದು ರಾಜಕೀಯ ಪ್ರೇರಿತ ಪ್ರಕರಣ ಎಂದು ಪ್ರಜ್ವಲ್ ಪರ ವಕೀಲರು ವಾದ ಮಂಡಿಸಿದರು. ಇನ್ನು ಅತ್ಯಾಚಾರ ಸಂತ್ರಸ್ತೆ ಕೆಲಸ ಬಿಟ್ಟು ತುಂಬಾ ವರ್ಷಗಳೇ ಆಗಿತ್ತು. ಪೊಲೀಸರ ಮುಂದೆ ನೀಡಿದ ಹೇಳಿಕೆಗೂ, ನ್ಯಾಯಾಧೀಶರ ಮುಂದೆ ಹೇಳಿಕೆಗೂ ವ್ಯತ್ಯಾಸ ಇದೆ ಎಂದು ಪ್ರಜ್ವಲ್ ಪರ ವಕೀಲರು ವಾದ ಮಂಡಿಸಿದರು. ನಂತರ, ಈ ಅರ್ಜಿಯನ್ನೂ ನ್ಯಾಯಮೂರ್ತಿಗಳು ಮುಂದೂಡಿದರು.




