ನರೇಂದ್ರ ಮೋದಿ ಪ್ರಧಾನಿ ಸ್ಥಾನವನ್ನು ನೀಡಲಿ ಎಂದು ಸಿಎಂ ಸವಾಲು
ಮೈಸೂರು: ದಲಿತರಿಗೆ ಸ್ಥಾನ ಬಿಟ್ಟುಕೊಡಲಿ ಎಂದು ಹೇಳುತ್ತಿರುವ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನವನ್ನು ದಲಿತರಿಗೆ ಬಿಟ್ಡು ಕೊಡಲಿ, ನರೇಂದ್ರ ಮೋದಿ ಪ್ರಧಾನಿ ಸ್ಥಾನವನ್ನು ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲೆಸೆದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಎಲ್ಲರೂ ಆಗಿದ್ದಾರೆ. ಕಾಂಗ್ರೆಸ್ ಮಾತ್ರ ಸಂವಿಧಾನ ಹಾಗೂ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆಯೇ ಹೊರತು ಬಿಜೆಪಿಯಲ್ಲ ಎಂದರು.
ಮೈಸೂರಿನ ಜುಲೈ 19ರಂದು (ಶನಿವಾರ) ನಡೆಸಲಾಗುತ್ತಿರುವ ಸಮಾವೇಶ ಯಾರ ಶಕ್ತಿ ಪ್ರದರ್ಶನವೂ ಅಲ್ಲ. ಪಕ್ಷ ಹಾಗೂ ಸರ್ಕಾರ ಮಾಡಿರುವ ಕೆಲಸಗಳನ್ನು ಜನರ ಮುಂದಿಡುವ ಪ್ರಯತ್ನವಿದು. ಈ ಸರ್ಕಾರ ಏನೂ ಮಾಡುತ್ತಿಲ್ಲ, ಗ್ಯಾರಂಟಿ ಯೋಜನೆಗಳ ದುಡ್ಡಿಲ್ಲ ಎಂದೆಲ್ಲಾ ಬಿಜೆಪಿಯವರು ಸುಳ್ಳು ಹೇಳುತ್ತಾ ಅಪಪ್ರಚಾರ ಮಾಡುತ್ತಿದ್ದಾರೆ. ಜನರಿಗೆ ವಾಸ್ತವ ಸ್ಥಿತಿ ತಿಳಿಸಲು ಸಮಾವೇಶ ನಡೆಸುತ್ತಿದ್ದೇವೆ. ದುಡ್ಡಿಲ್ಲದೇ ಹೋಗಿದ್ದರೆ ಮೈಸೂರೊಂದರಲ್ಲೇ ₹ 2,600 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ ಮಾಡಲಾಗುತ್ತಿತ್ತಾ? ಎಂದು ಕೇಳಿದರು.
‘ಸೆಪ್ಟೆಂಬರ್‌ನಲ್ಲಿ ಕ್ರಾಂತಿ ಆಗುತ್ತದೆ ಎಂದು ನಾನೇನೂ ಹೇಳಿಲ್ಲ. ಯಾರು ಹೇಳಿದ್ದಾರೆಯೋ ಅವರನ್ನೇ ಕೇಳಿ’ ಎಂದು ಪ್ರತಿಕ್ರಿಯಿಸಿದರು.




