ಬೆಂಗಳೂರು: ನಕ್ಸಲ್ ನಾಯಕ ವಿಕ್ರಂ ಗೌಡ ಅವರನ್ನು ಪೊಲೀಸ್ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿರುವ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ತನ್ನ ನಿಲುವನ್ನು ಬಲವಾಗಿ ಸಮರ್ಥಿಸಿಕೊಂಡಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದು, ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್ ಕೌಂಟರ್ ಮಾಡಲಾಗಿದೆ ಎಂದರು.
ನಕ್ಸಲ್ ಚಟುವಟಿಕೆಯಲ್ಲಿ ಪ್ರಮುಖವಾಗಿ ಭಾಗಿಯಾಗಿದ್ದ ವಿಕ್ರಂಗೌಡ ಎನ್ ಕೌಂಟರ್ ನಲ್ಲಿ ಹತನಾಗಿರುವ ಬಗ್ಗೆ ಪ್ರಗತಿಪರ ಚಿಂತಕರು ಅನುಮಾನಗಳನ್ನು ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿಕ್ರಂಗೌಡ ಅವರಿಗೆ ಶರಣಾಗುವಂತೆ ಆದೇಶ ನೀಡಲಾಗಿತ್ತು. ಆದರೆ ಅವರು ಶರಣಾಗಿರಲಿಲ್ಲ. ವಿಕ್ರಂಗೌಡ ಅವರನ್ನು ಹಿಡಿದವರಿಗೆ ಕೇರಳ ಸರ್ಕಾರ 25 ಲಕ್ಷ ಹಾಗೂ ಕರ್ನಾಟಕ ಸರ್ಕಾರ 5 ಲಕ್ಷ ಬಹುಮಾನವನ್ನು ಘೋಷಿಸಿತ್ತು ಎಂದರು.




