ಸ್ವಚ್ಛತಾ ಹಿ ಸೇವಾ ಅಭಿಯಾನ
ಬಳ್ಳಾರಿ: ಸ್ವಚ್ಚತೆ ಕಾಪಾಡುವಲ್ಲಿ ನಮ್ಮನ್ನು ನಾವು ಮನಪೂರ್ವಕವಾಗಿ ತೊಡಗಿಸಿಕೊಂಡರೆ ರೋಗ ರುಜಿನಗಳಿಂದ ಮುಕ್ತರಾಗಬಹುದು. ಮನೆಯಿಂದ ಗ್ರಾಮ, ಗ್ರಾಮದಿಂದ ರಾಷ್ಟ್ರಮಟ್ಟದವರಗೆ ಸ್ವಚ್ಚತೆಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯತ್ನ ಯೋಜನಾ ನಿರ್ದೇಶಕ ವಿನೋದ್ ಕುಮಾರ್ ಅವರು ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಜಿಲ್ಲಾ ಪಂಚಾಯತ್, ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಇವರ ಸಹಯೋಗದಲ್ಲಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಸ್ವಚ್ಛತಾ ಹಿ ಸೇವಾ ಅಭಿಯಾನ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೆನೆರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಸಹಾಯಕ ಮಹಾ ಪ್ರಬಂಧಕರಾದ ಡಿವಿಪಿಆರ್ ಮುರಳಿ ಕೃಷ್ಣ ಮಾತನಾಡಿ, ಸ್ವಚ್ಛತೆ ಎಂಬುದು ನಮ್ಮ ಮನೆಯಿಂದ ಪ್ರಾರಂಭವಾಗಬೇಕು ಇದರಲ್ಲಿ ನಾವೂ ಪ್ರತಿನಿತ್ಯ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು ಎಂದರು.
ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಎಲ್ಡಿಎಮ್ ಗಿರೀಶ್ ವಿ.ಕುಲಕರ್ಣಿ ಮಾತನಾಡಿ, ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದರ ಜೊತೆಗೆ ತ್ಯಾಜ್ಯ ವಸ್ತುಗಳ ಸರಿಯಾದ ಕ್ರಮದಲ್ಲಿ ವಿಲೇವಾರಿ ಮಾಡಬೇಕು. ಈ ನಿಟ್ಟಿನಲ್ಲಿ ಪ್ಲಾಸ್ಟಿಕ್ ಮುಕ್ತ ಪರಿಸರವನ್ನಾಗಿ ಮಾಡಲು ಎಲ್ಲರೂ ಶ್ರಮಿಸೋಣ ಎಂದರು.
ಈ ವೇಳೆ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಹಿರಿಯ ವ್ಯವಸ್ಥಾಪಕ ರಾಜೇಶ್, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ರಾಜೇಸಾಬ್ ಹೆಚ್.ಎರಿಮನಿ, ಆರ್ಥಿಕ ಸಮಾಲೋಚಕರಾದ ದಿನೇಶ್, ಜಡೆಪ್ಪ, ಚೆನ್ನಪ್ಪ, ಸಿದ್ದಲಿಂಗಮ್ಮ, ಸಂತೋಷ ಕುಮಾರ್ ಸೇರಿದಂತೆ 30 ಜನ ಶಿಬಿರಾರ್ಥಿಗಳು ಇದ್ದರು.




