ನೀತಿ ಸಂಹಿತೆ ಉಲ್ಲಂಘನೆ, ಚೆಕ್ ಪೋಸ್ಟ್ ನಲ್ಲಿ ರೂ.3.98 ಲಕ್ಷ ನಗದು ವಶ

2 years ago

ದಾವಣಗೆರೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ನ್ಯಾಮತಿ ತಾಲ್ಲೂಕಿನ ಹೊಳೆಹರಹಳ್ಳಿ ಚೆಕ್ ಪೋಸ್ಟ್ ಬಳಿ ಮಾರ್ಚ್ 20 ರಂದು ದಾಖಲೆ ಇಲ್ಲದೆ ಸಾಗಣೆ ಮಾಡುತ್ತಿದ್ದ 3.98 ಲಕ್ಷ ನಗದು ಮತ್ತು 21 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.

Leave a Reply