ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸಚಿವರು ಮತ್ತು ಶಾಸಕರ ಕಚೇರಿಗಳಲ್ಲಿ ರಾಜಕೀಯ ಚಟುವಟಿಕೆಗಳು ಮುಂದುವರೆದಿವೆ. ಇದು ಚುನಾವಣಾ ಸಮಿತಿಯ ಉಲ್ಲಂಘನೆಯಾಗಿದೆ ಎಂದು ಬಿಜೆಪಿ ಮುಖಂಡರ ನಿಯೋಗ ರಾಜ್ಯ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದೆ.
ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿ ಎಂದು ಭಾವಿಸಿರುವಂತೆ ಕಾಣುತ್ತದೆ. ಮಾರ್ಚ್ 30ರಂದು ವಿಧಾನಸೌಧದ ಕಚೇರಿಯಲ್ಲಿ ನಜ್ಮಾ ನಜೀರ್ ಚಿಕ್ಕನೆರಳೆಯವರನ್ನು ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ ಹಮ್ಮಿಕೊಂಡು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರು ಸರ್ಕಾರಿ ಕಚೇರಿಯನ್ನು ಪಕ್ಷದ ಚಟುವಟಿಕೆಗಳಿಗೆ ಬಳಕೆ ಮಾಡಿರುವುದು ಸರಿಯಲ್ಲ ಎಂದು ಬಿಜೆಪಿ ದೂರಿದೆ.
ರಾಜ್ಯದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರ ಮೂಗಿನಡಿಯಲ್ಲಿ ಈ ಕಾರ್ಯಕ್ರಮ ನಡೆದರೂ ಯಾವುದೇ ಕ್ರಮ ಜರುಗಿಸಿಲ್ಲ. ಅವರು ತೋರಿಸುವ ನಿಷ್ಕ್ರೀಯತೆ ಆತಂಕಕಾರಿಯಾಗಿದೆ ಎಂದು ಬಿಜೆಪಿ ದೂರಿನಲ್ಲಿ ಹೇಳಿದ್ದು, ಸಚಿವರು ಹಾಗೂ ಶಾಸಕರಿಗೆ ವಿಧಾನಸೌಧದ ಕಚೇರಿಯಲ್ಲಿ ರಾಜಕೀಯ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧ ಹೇರಬೇಕು. ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಕುರಿತು ಸೂಕ್ತ ನಿರ್ದೇಶನ ನೀಡುವಂತೆ ಕೋರಿದೆ.




