ಬೆಂಗಳೂರು: ಪಶ್ಚಿಮ ಬಂಗಾಳದ ಕೊಲ್ಕತ್ತಾ, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ಕಡೆ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಇತ್ತೀಚೆಗೆ ಬೆಂಗಳೂರುಳಿನ ಕೆಲವು ಕಡೆ ಕಿಡಿಗೇಡಿಗಳು ರಾತ್ರಿ ವೇಳೆ ಒಂಟಿಯಾಗಿ ತೆರಳುವ ಮಹಿಳೆಯರಿಗೆ ಕಿರುಕುಳ ನೀಡುವ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸುವ ಪ್ರಕರಣಗಳು ವರದಿಯಾಗುತ್ತಿದ್ದು ಅಂತವುಗಳ ಮೇಲೆ ತೀವ್ರ ನಿಗಾ ಇರಿಸುವ ಜೊತೆಗೆ ಮಹಿಳೆಯರ ರಕ್ಷಣೆಗೆ ಮುಂದಾಗಿದ್ದಾರೆ.
ರಾತ್ರಿಯ ವೇಳೆ ತೊಂದರೆಗೆ ಸಿಲುಕುವ ಮಹಿಳೆಯರ ನೆರವಿಗೆ ತುರ್ತಾಗಿ ಧಾವಿಸುವ ದೃಷ್ಟಿಯಿಂದ ನಗರದ ಎಲ್ಲಾ ಸಂಚಾರಿ ಪೊಲೀಸ್ ಠಾಣೆಗಳಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲು ಜಂಟಿ ಪೊಲೀಸ್ ಆಯುಕ್ತ ಅನುಚೇತ್ ಆದೇಶಿಸಿದ್ದಾರೆ.
ರಾತ್ರಿ ವೇಳೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಉಪಸ್ಥಿತರಿರಬೇಕಾದ ಈ ಮಹಿಳಾ ಸಿಬ್ಬಂದಿ ತುರ್ತು ಕರೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಸೂಚಿಸಿದ್ದು, ಅಗತ್ಯವಶ್ಯದ ಕಡೆ ಹೆಚ್ಚಿನ ಸಿಬ್ಬಂದಿಯನ್ನು ಕರೆಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.




