ಬೆಂಗಳೂರು: ವಿಶ್ವಕರ್ಮ ಸಮುದಾಯದ ಪ್ರಭಾವಿ ನಾಯಕರಾಗಿರುವ ಕೆಪಿ ನಂಜುಂಡಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವುದಾಗಿ ಪ್ರಕಟಿಸಿದ ಬೆನ್ನಲ್ಲೇ ವಿಶ್ವಕರ್ಮ ಮಹಾಸಭಾ ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದೆ.
- ಕಳ್ಳಾಟ ಇಲ್ಲದಿದ್ದರೆ ಮುಚ್ಚಿಡುವುದಕ್ಕೇನಿದೆ?
- ಮೊದಲ ಸಿನಿಮಾ ಚಿತ್ರ ಬಿಡುಗಡೆ ನೆನಪು ಮಾಡಿಕೊಂಡ ಅನಿರುದ್ಧ
- ಮಲೆನಾಡ ಶೈಲಿಯ ಬಿಸಿಬಿಸಿ ‘ನೀರುಪ್ಪಿಟ್ಟು’ ಮಾಡುವ ವಿಧಾನ
- ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಅರ್ಜಿ ಆಹ್ವಾನ
- ಎಸ್ಐಆರ್ ರಾಜಕೀಯಕ್ಕೆ ಬಳಕೆ ಸರಿಯಲ್ಲ: ಡಿ ಕೆ ಶಿವಕುಮಾರ್
ಭಾರತಾದ್ಯಂತ ಸುಮಾರು 12 ಕೋಟಿ ಜನಸಂಖ್ಯೆ ಇರುವ ವಿಶ್ವಕರ್ಮ ಸಮಾಜಕ್ಕೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ವಿಶ್ವಕರ್ಮ ಸಮ್ಮಾನ್ ಯೋಜನೆಯನ್ನು ತಂದು ಲಕ್ಷಾಂತರ ಕುಟುಂಬಗಳಿಗೆ ನೆರವಾಗಿ, ನಮ್ಮ ಸಮಾಜವನ್ನು ಪ್ರಪಂಚಾದ್ಯಂತ ಗುರುತಿಸುವ ಹಾಗೆ ಮಾಡಿದ್ದಾರೆ. ಆದ್ದರಿಂದ ಬಿಜೆಪಿಗೆ ನಮ್ಮ ಸಮುದಾಯ ಬೆಂಬಲವಾಗಿ ನಿಲ್ಲಲಿದೆ ಎಂದು ಅಖಿಲ ಭಾರತ ವಿಶ್ವಕರ್ಮ ಮಹಾ ಸಂಘದ ಅಧ್ಯಕ್ಷ ಡಾ.ಜಯಂತ್ ಕೆ.ಎಂ. ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಮಾಜದ ಹಿತದೃಷ್ಟಿ ಎಂದರೆ ನಮ್ಮ ವಿಶ್ವಕರ್ಮ ಸಮಾಜವು ರಾಜಕೀಯ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಕಾರಣ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಮ್ಮ ಸಮಾಜವನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ನಮ್ಮ ಸಮಾಜಕ್ಕೆ ಬೆಂಬಲ ನೀಡುತ್ತಾರೆಂಬ ನಂಬಿಕೆಯಿಂದ ನಮ್ಮ ಸಂಘಟನೆ ಬೆಂಬಲವನ್ನು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ನೀಡುವ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದರು.
ಅಯೋಧ್ಯ ಶ್ರೀರಾಮನ ವಿಗ್ರಹವನ್ನು ಕೆತ್ತನೆ ಮಾಡಲು ನಮ್ಮ ಸಮಾಜದ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಅವಕಾಶ ನೀಡುವ ಮುಖಾಂತರ ನಮ್ಮ ಸಮಾಜದ ಕೀರ್ತಿಯನ್ನು ರಾಷ್ಟ್ರ ಹಾಗೂ ವಿಶ್ವಕ್ಕೆ ತೋರಿಸುವಲ್ಲಿ ಮೋದಿಯವರ ಸಹಕಾರ ಹೆಚ್ಚಿರುವ ಕಾರಣ ನಮ್ಮ ಸಮಾಜ ಬಿ.ಜೆ.ಪಿ.ಗೆ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವ ತೀರ್ಮಾನ ಮಾಡಿದೆ ಎಂದರು.




