ಬೆಂಗಳೂರು: ನಟ ದರ್ಶನ್‌ಗೆ ಜೈಲಿನಲ್ಲಿ ಅಗತ್ಯ ಸೌಲಭ್ಯ ಒದಗಿಸಲಾಗಿದೆಯೇ ಎನ್ನುವ ಪರಿಶೀಲಿಸುವಂತೆ ನ್ಯಾಯಾಲಯದ ಸೂಚನೆ ಹಿನ್ನೆಲೆಯಲ್ಲಿ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಮತ್ತು ಸದಸ್ಯರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಲಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಎರಡನೇ ಬಾರಿಗೆ ಜೈಲು ಸೇರಿರುವ ನಟ ದರ್ಶನ್ ಜೈಲಿನಲ್ಲಿ ಅಧಿಕಾರಿಗಳು ಅಗತ್ಯ ಸೌಲಭ್ಯ ನೀಡಿಲ್ಲ ಎಂದು ಕೋರ್ಟ್‌ಗೆ ಅರ್ಜಿ ಹಾಕಿದ್ದರು. ದರ್ಶನ್ ಅರ್ಜಿ ಪುರಸ್ಕರಿಸಿದ ಕೋರ್ಟ್ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಿಗೆ ಜೈಲಿಗೆ ಭೇಟಿ ಪರಿಶೀಲಿಸುವಂತೆ ಸೂಚನೆ ನೀಡಿತ್ತು.
ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ. ಅಲ್ಲದೇ ದರ್ಶನ್ ಇರುವ ಕ್ವಾರೆಂಟೈನ್ ಸೆಲ್‌ನ ಪರಿಶೀಲನೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಜೈಲಿನಲ್ಲಿ ದರ್ಶನ್‌ಗೆ ತಲೆ ದಿಂಬು, ಹಾಸಿಗೆ ನೀಡಲಾಗಿದ್ಯಾ? ಜೈಲಿನ ಮ್ಯಾನ್ಯುವಲ್ ಅಡಿ ನೀಡಲಾಗಿರುವ ವಸ್ತುಗಳು ಯವ್ಯಾವು? ಹೀಗೆ ಅಧಿಕಾರಿಗಳು ಎಲ್ಲದರ ವರದಿ ಪಡೆಯಲಿದ್ದಾರೆ.
ಆ ಬಳಿಕ ಕಾನೂನು ಸೇವಾ ಅಧಿಕಾರಿಯು ದರ್ಶನ್ ಹೇಳಿಕೆ ಪಡೆಯಲಿದ್ದಾರೆ. ಈ ವರದಿಯನ್ನು ಅ.18ರ ಒಳಗೆ ಅಧಿಕಾರಿಗಳು ಕೋರ್ಟ್ ಗೆ ಸಲ್ಲಿಸಲಿದ್ದಾರೆ. ಹೀಗಾಗಿ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ವರದಿ ಸಿದ್ಧಪಡಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.




