ಕಲಬುರ್ಗಿ: ಗುಲ್ಬರ್ಗಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರುಗಳು, ಮಾಜಿ ಸಚಿವರು, ಪಕ್ಷದ ಮುಖಂಡರು ಹಾಗು ಕಾರ್ಯಕರ್ತರೊಂದಿಗೆ ನಗರದ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ನಾಮಪತ್ರ ಸಲ್ಲಿಕೆ ಕುರಿತು ಹೇಳಿಕೆ ನೀಡಿರುವ ಪ್ರಿಯಾಂಕ್ ಖರ್ಗೆ, ಕಳೆದ ಐದು ವರ್ಷದಿಂದ ಕಲಬುರಗಿ ಜಿಲ್ಲೆಯು ಅಭಿವೃದ್ಧಿಯಲ್ಲಿ ಸಂಪೂರ್ಣವಾಗಿ ಹಿಂದೆ ಬಿದ್ದಿದೆ. ಕಳೆದ ಬಾರಿ ಮಾಡಿದ ಒಂದು ತಪ್ಪಿನಿಂದ ಜಿಲ್ಲೆಯು ಪಡೆದುಕೊಳ್ಳುವುದಕ್ಕಿಂದ ಕಳೆದುಕೊಂಡಿದ್ದೆ ಹೆಚ್ಚು. ಈ ನಿಟ್ಟಿನಲ್ಲಿ ಈ ಬಾರಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿದ್ದಾರೆ.
ರಾಜ್ಯ ಕಾಂಗ್ರೆಸ್ ಪಕ್ಷವು ಚುನಾವಣೆಗೂ ಮೊದಲು ನೀಡಿದ್ದ ಐದು ಗ್ಯಾರಂಟಿಗಳ ವಾಗ್ದಾನವನ್ನು ಪೂರೈಸಿ, ನುಡಿದಂತೆ ನಡೆದಿದೆ. ಬಡವರು, ಕಾರ್ಮಿಕರು ಸೇರಿದಂತೆ ಸರ್ವಜನಾಂಗದ ಅಭುದ್ಯಯಕ್ಕಾಗಿ, ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿದ್ದಾರೆ.




