ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಕುರುಗೋಡು ತಾಪಂ ಇಒ ಹಾಗೂ ತಾಲ್ಲೂಕು ಸ್ವೀಪ್ ನೋಡೆಲ್ ಅಧಿಕಾರಿ ಕೆ.ವಿ.ನಿರ್ಮಲಾ ಕರೆ ನೀಡಿದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಕುರುಗೋಡು ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ಕಡಿಮೆ ಮತದಾನವಾಗಿರುವ 1ನೇ ವಾರ್ಡ್‍ಗೆ ಭೇಟಿ ನೀಡಿ ಮತದಾನ ಜಾಗೃತಿ ಮೂಡಿಸಿ ಮಾತನಾಡಿದ ಅವರು, ಮತದಾನ ಪ್ರಕ್ರಿಯೆಯಲ್ಲಿ ನಮ್ಮ ಓಟು, ನಮ್ಮ ಹಕ್ಕಾಗಿದ್ದು, ಕಡ್ಡಾಯವಾಗಿ ಮತ ಚಲಾಯಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದರು.
ಪ್ರತಿ 5 ವರ್ಷಕ್ಕೊಮ್ಮೆ ಬರುವ ಚುನಾವಣೆಯ ಹಬ್ಬದಲ್ಲಿ ಎಲ್ಲರೂ ಮತದಾನ ಮಾಡಬೇಕು. ಯಾವುದೇ ಹಣ, ಆಮಿಷಗಳಿಗೆ ಒಳಗಾಗದೇ ನಿರ್ಭೀತಿಯಿಂದ ಮತ ಚಲಾಯಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಈ ಸಂಧರ್ಭದಲ್ಲಿ ಕೋಳೂರು ಗ್ರಾಪಂ ಅಧಿಕಾರಿಗಳು ಹಾಗೂ ಸಿಬ್ಬಂದಿ, ಗ್ರಾಮದ ನಾಗರಿಕರು ಇದ್ದರು.




