ಲೋಕಸಭಾ ಚುನಾವಣೆಯಲ್ಲಿ ಕೆಲವು ಆಯ್ದ ಮತಕ್ಷೇತ್ರಗಳಲ್ಲಿ ಮಾತ್ರ ಮತಗಳವು ಆಗಿದೆ: ಸಿದ್ದರಾಮಯ್ಯ

1 year ago

ದೆಹಲಿ: ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಎಲ್ಲ ಕ್ಷೇತ್ರದಲ್ಲಿ ಮತಎಣಿಕೆಯಲ್ಲಿ ಕಾಂಗ್ರೆಸ್ ಮುಂದಿದ್ದರೂ, ಮಹದೇವಪುರ ಕ್ಷೇತ್ರದಿಂದಾಗಿ ಕಾಂಗ್ರೆಸ್ ಸೋಲುವಂತಾಯಿತು. ಈ ರೀತಿ ಆಗಿರುವುದನ್ನು ಪ್ರಶ್ನಿಸಿದ ರಾಹುಲ್ ಗಾಂಧಿಯವರು, ಈ ಬಗ್ಗೆ ಸಾಕ್ಷ್ಯಾಧಾರಗಳು ಇವೆ ಎಂದು ತಿಳಿಸಿದ್ದಾರೆ ಎಂದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಸಂಬಂಧಿಸಿದ ಪ್ರಕರಣಗಳು ಇತ್ಯರ್ಥವಾಗುವುದರೊಳಗೆ ಸರ್ಕಾರದ ಅವಧಿಯೇ ಮುಗಿದಿರುತ್ತದೆ. ಹಲವು ಪ್ರಕರಣಗಳಲ್ಲಿ ಮತಪಟ್ಟಿ ವಿಚಾರದಲ್ಲಿ ಚುನಾವಣಾ ಆಯೋಗ ನಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕೆಲವು ಆಯ್ದ ಮತಕ್ಷೇತ್ರಗಳಲ್ಲಿ ಮಾತ್ರ ಮತಗಳವು ಆಗಿದೆ ಎಂದರು.

Leave a Reply