ಯೋಗದ ಮಹತ್ವ ಸಾರಲು ವಾಕಥಾನ್

4 years ago

ಬೆಂಗಳೂರು: ರೋಗ ಮುಕ್ತ ಹಾಗೂ ಯೋಗದ ಮಹತ್ವವನ್ನು ವಿಶ್ವಕ್ಕೆ ಸಾರಿದವರು ಪ್ರಧಾನಿ ನರೇಂದ್ರಮೋದಿ ಎಂದು ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ ಹೇಳಿದರು.

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ಹೊಂಬೇಗೌಡನಗರ ವಾರ್ಡ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಅಂತರಾಷ್ಟ್ರೀಯ ಯೋಗದಿನ ಅಚರಣೆ ಸಮಿತಿ ವತಿಯಿಂದ ವಾಕಥಾನ್ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತಾಡಿದ ಅವರು, ಯೋಗದ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಪ್ರತಿ ದಿನ ಒಂದು ಘಂಟೆ ಯೋಗ ಮಾಡುವುದರಿಂದ ಮಾನಸಿಕ, ದೈಹಿಕವಾಗಿ ಆರೋಗ್ಯವಂತರಾಗಿ ಇರಬಹುದು ಎಂಬ ಸಂದೇಶ ತಿಳಿಸಲು ಹೊಂಬೇಗೌಡನಗರ ವಾರ್ಡ್ ನಲ್ಲಿ ಪ್ರಮುಖ ಬೀದಿಗಳಲ್ಲಿ ನಡಿಗೆ ಮೂಲಕ ಜಾಗೃತಿ ಮೂಡಿಸಲಾಯಿತು. 21ನೇ ತಾರೀಖು ಅಂತರಾಷ್ಟೀಯ ಯೋಗ ದಿನಾಚರಣೆಯಲ್ಲಿ ಸಾರ್ವಜನಿಕರು ಪಾಲ್ಗೊಳಬೇಕು ಎಂದು ಮನವಿ ಮಾಡಿದರು.

ಗರುಡಾ ಫೌಂಡೇಷನ್ ಸಂಸ್ಥಾಪಕಿ ಮೇದಿನಿ ಗರುಡಾಚಾರ್, ಅರಣ್ಯ ಅಭಿವೃದ್ದಿ ನಿಗಮದ ನಿರ್ದೇಶಕಿ ಭಾಗ್ಯವತಿ ಅಮರೇಶ್, ನೂರಾರು ಯೋಗಪಟುಗಳು ವಾಕಥಾನ್ ನಲ್ಲಿ ಪಾಲ್ಗೊಂಡಿದ್ದರು.

Leave a Reply