ಬಳ್ಳಾರಿ: ನಗರದ ವಕ್ಫ್ ಸಂಸ್ಥೆ ಈದ್ಗಾ (ಸುನ್ನಿ), ಬ್ರೂಸ್‌ಪೇಟ್ ಸಾಮಾನ್ಯ ಸದಸ್ಯರ ದಾಖಾಲಾತಿ ನೋಂದಣಿಗೆ ಅಧಿಸೂಚನೆ ಪ್ರಕಟವಾಗಿದ್ದು, ಈಗಾಗಲೇ ಸಾಮಾನ್ಯ ಸದಸ್ಯರ ನೋಂದಣಿ ಪ್ರಕ್ರಿಯೆ ನಡೆಯುತ್ತಿದ್ದು, ನೋಂದಣಿಯ ಅವಧಿಯನ್ನು ಅ.25ರ ವರೆಗೆ ವಿಸ್ತರಿಸಲಾಗಿದೆ ಎಂದು ಈದ್ಗಾ(ಸುನ್ನಿ), ಬ್ರೂಸ್‌ಪೇಟೆಯ ನೋಂದಣಾಧಿಕಾರಿಗಳು ತಿಳಿಸಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಭರ್ತಿ ಮಾಡಿದ ಅರ್ಜಿ ನಮೂನೆಗಳೊಂದಿಗೆ ಇತ್ತೀಚಿನ 3 ಭಾವಚಿತ್ರಗಳು ಹಾಗೂ ರೂ.300 ಶುಲ್ಕ ಹಾಗೂ ಅಧಿಕೃತ ವಿಳಾಸದ 02 ಗುರುತಿನ ಚೀಟಿಗಳೊಂದಿಗೆ ಅಕ್ಟೋಬರ್ 25 ರೊಳಗೆ ಜಿಲ್ಲಾ ವಕ್ಫ್ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ನೋಂದಣಿ ಅಧಿಕಾರಿಗಳ ಕಚೇರಿಗೆ ಸಲ್ಲಿಸಬಹುದು.
ದಾಖಲಾದ ಸದಸ್ಯರ ಕರಡು ಪಟ್ಟಿಯನ್ನು ನ.04 ರಂದು ಪ್ರಕಟಿಸಲಾಗುತ್ತದೆ. ಕರಡು ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಹಾಗೂ ಸಲಹೆ-ಸೂಚನೆಗಳಿದ್ದಲ್ಲಿ ನ.05 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯೊಳಗೆ ಸಲ್ಲಿಸಬಹುದು. ಆಕ್ಷೇಪಣೆಗಳ ವಿಚಾರಣೆ ನ.06 ರಂದು ನಡೆಸಲಾಗುತ್ತದೆ.
ದಾಖಲಾದ ಸಾಮಾನ್ಯ ಸದಸ್ಯರ ಅಂತಿಮ ಪಟ್ಟಿಯನ್ನು ನ.08 ರಂದು ಮಧ್ಯಾಹ್ನ 3.30 ಗಂಟೆಗೆ ಜಿಲ್ಲಾ ವಕ್ಫ್ ಕಚೇರಿಯಲ್ಲಿ ಪ್ರಕಟಿಸಲಾಗುವುದು ಮತ್ತು ಸಾಮಾನ್ಯ ಸದಸ್ಯರಿಗೆ ನ.11 ರಿಂದ ನ.14 ರವರೆಗೆ ಗುರುತಿನ ಚೀಟಿ(ಐಡಿ ಕಾರ್ಡ್)ಗಳನ್ನು ವಿತರಿಸಲಾಗುತ್ತದೆ.
ಈಗಾಗಲೇ 2019ರಲ್ಲಿ ಅರ್ಜಿ ಸಲ್ಲಿಸಿದ ಅರ್ಭ್ಯಥಿಗಳು ಚಂದಾದಾರಿಕೆ ಶುಲ್ಕ ರೂ. 200/- ಹಾಗೂ ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಈದ್ಗಾ(ಸುನ್ನಿ), ಬ್ರೂಸ್‌ಪೇಟೆಯ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




