ಹಾಸನ: ನಮ್ಮ ನಾಡು ನುಡಿ ಸಂಸ್ಕೃತಿ ಆಚಾರ, ವಿಚಾರ, ಜಾನಪದ, ಸಂಪ್ರದಾಯಗಳ ನ್ನು ಬಿಂಬಿಸುವ ಕಲೆಗಳನ್ನು ಜೀವಂತವಾಗಿ ಉಳಿಸಲು ಯುವ ಸಮೂಹವನ್ನು ಸದೃಢಗೊಳಿಸುವುದು ಅಗತ್ಯವಿದೆ ಎಂದು ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ ಮಾಚಯ್ಯ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಮೇರಾ ಯುವ ಭಾರತ್ ಸಹಯೋಗದಲ್ಲಿಂದು ಹಾಸನಾಂಬ ಕಲಾ ಕ್ಷೇತ್ರದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಬಹುದೊಡ್ಡ ಮಾನವ ಸಂಪನ್ಮೂಲ ಹೊಂದಿರುವ ನಮ್ಮ ದೇಶದಲ್ಲಿ ಶೇ.62 ರಷ್ಟು 40 ವರ್ಷದೊಳಗಿನ ಯುವ ಜನತೆ ಹೊಂದಿರುವುದು ಹೆಮ್ಮೆ ವಿಷಯ ಎಂದರು.
ನಮ್ಮ ದೇಶ ಪ್ರಪಂಚದ ನಾನಾ ರಾಷ್ಟ್ರಗಳಿಗೆ ಮಾನವ ಸಂಪನ್ಮೂಲ ರಪ್ತು ಮಾಡುವ ಸ್ಥಿತಿಯಲ್ಲಿರುವುದು ಸಂತೋಷ ತರುತ್ತದೆ ಎಂದರು. ಭಾರತೀಯರು ಎಲ್ಲಾ ರಂಗಗಳಲ್ಲೂ ತಮ್ಮ ಛಾಪು ಮೂಡಿಸಿದ್ದಾರೆ.ಯುವ ಜನತೆ ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಿ ಪ್ರಜ್ವಲಿಸಿ ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹೆಚ್.ಎಲ್.ಮಲ್ಲೇಶ್ ಗೌಡ ಮಾತನಾಡಿ ಯುವ ಜನತೆಯ ಮೂಲಕ ದೇಶವನ್ನು ಎತ್ತರದ ಸ್ಥಾನದಲ್ಲಿ ಕಲ್ಪಿಸಿಕೊಳ್ಳುತ್ತಿದ್ದೇವೆ. ಈ ನಿಟ್ಟಿನಲ್ಲಿ ಯುವ ಜನತೆ ಪ್ರಾಮಾಣಿಕ ಪ್ರಯತ್ನ ಮಾಡಿದರೆ ವಿಶ್ವ ಆಳಾಬಹುದು ಎಂದರು.
ಯುವ ಜನತೆ ತಮ್ಮಲ್ಲಿರುವ ಪ್ರತಿಭೆಯನ್ನು ಸಕಾರಾತ್ಮಕ ವಾಗಿ ನಿರ್ದಿಷ್ಟ ಮಾರ್ಗದಲ್ಲಿ ವಿನಿಯೋಗಿಸಿದರೆ ವಿಶ್ವ ಮಟ್ಟದಲ್ಲಿ ಬೆಳಗಬಹುದು. ಯುವ ಜನತೆ ಅಮುಲ್ಯವಾದ ಸಮಯವನ್ನು ಅನಗತ್ಯವಾಗಿ ಟಿವಿ ವೀಕ್ಷಣೆ, ಸಾಮಾಜಿಕ ಜಾಲತಾಣಗಳಲ್ಲಿ ಕಳೆಯುತ್ತಾ ತಮ್ಮಲ್ಲಿರುವ ಪ್ರತಿಭೆ ವ್ಯರ್ಥವಾಗುತ್ತಿದೆ. ಭವಿಷ್ಯದ ಭಾರತದ ಬಗ್ಗೆ ಆತಂಕ ಕಾಡುತ್ತಿದೆ. ತಮ್ಮನ್ನು ಗಟ್ಟಿಗೊಳಿಸಿಗೊಂಡು ದೇಶ ಕಟ್ಟಲು ಮುಂದಾಗಬೇಕು. ತಮ್ಮ ಕುಟುಂಬ ಮತ್ತು ಗ್ರಾಮವನ್ನು ಪ್ರೀತಿಸುವುದರ ಮೂಲಕ ದೇಶ ಪ್ರೀತಿಯ ಕಡೆಗೆ ಸಾಗಲಿ ಎಂದರು.
ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಸಂಘದ ಅಧ್ಯಕ್ಷ ಕೃಷ್ಣೇಗೌಡ ಮಾತನಾಡಿ, ಯುವ ಜನತೆ ಜಾನಪದ ಕಲೆ, ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಸಾಗಿ ಎಂದು ಶುಭ ಹಾರೈಸಿದರು.
ಜಿಲ್ಲಾ ನೌಕರರ ಸಂಘದ ಕಾರ್ಯದರ್ಶಿ ಲಕ್ಷ್ಮಿಕಾಂತ್, ರಾಷ್ಟ್ರ ಪ್ರಶಸ್ತಿ ವಿಜೇತ ಬಿ.ಟಿ ಮಾನವ, ಹಿರಿಯ ಕಲಾವಿದರಾದ ಗ್ಯಾರಂಟಿ ರಾಮಣ್ಣ, ಶೇಖರಪ್ಪ, ಸಮಾಜ ಸೇವಕ ಕಟ್ಟಾಯ ಶಿವಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್ ಹಾಜರಿದ್ದರು.




