ಕುಡಿಯಲು ನೀರು ಯೋಗ್ಯವಿರುವ ಬಗ್ಗೆ ವರದಿ
ಧಾರವಾಡ: ಮಿಶ್ರಿಕೋಟಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳಿಂದ ಅಶುದ್ಧ ನೀರು ಸರಬರಾಜು ಆಗುತ್ತಿದೆ ಎಂಬ ಸಾರ್ವಜನಿಕ ದೂರಿನ ಬಗ್ಗೆ ಪರಿಶೀಲಿಸಿ, ಸೂಕ್ತ ಕ್ರಮವಹಿಸಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ನಿರ್ದೇಶನ ನೀಡಿದ ಹಿನ್ನಲೆಯಲ್ಲಿ ಮಿಶ್ರಿಕೋಟಿ ಗ್ರಾಮಕ್ಕೆ ಗ್ರಾಮೀಣ ಕುಡಿಯುವ ನೀರು ಮತ್ತು ನೈಲರ್ಮಲ್ಯ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಮಿಶ್ರಿಕೋಟಿ ಗ್ರಾಮದಲ್ಲಿ ಗ್ರಾಮಸ್ಥರಿಗೆ ಕುಡಿಯುವ ನೀರು ಸರಬರಾಜು ಮಾಡಲು ಮೂರು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಲೋಕೊಪಯೋಗಿ ಇಲಾಖೆಯ ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ನೀರು ಸರಬರಾಜು ಪೈಪ್ ಒಡೆದು ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದ್ದು, ಶೀಘ್ರದಲ್ಲಿ ಗ್ರಾಮಪಂಚಾಯತಿಯಿಂದ ಪೈಪ್ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ.
ಉಳಿದಂತೆ ಗ್ರಾಮದ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳಿಂದ ನಿರಂತರವಾಗಿ ಸಾರ್ವಜನಿಕರಿಗೆ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ ಕೆಲವರು ಘಟಕಗಳಿಂದ ಅಶುದ್ಧ ನೀರು ಬರುತ್ತಿದೆ ಎಂದು ದೂರು ನೀಡಿದ್ದ ಹಿನ್ನೆಲೆಯಲ್ಲಿ ಕಳೆದ ಸಪ್ಟೆಂಬರ್ 15ರಂದು ಮತ್ತು ನಿನ್ನೆ ಅಕ್ಟೋಬರ್ 09ರಂದು ಈ ಎರಡು ಘಟಕಗಳಿಂದ ನೀರಿನ ಮಾದರಿಯನ್ನು ಸಂಗ್ರಹಿಸಿ, ಪ್ರಯೋಗಾಲಯದಲ್ಲಿ ಕುಡಿಯುವ ನೀರಿನ ಪರೀಕ್ಷೆ ಕೈಗೊಳ್ಳಲಾಗಿದೆ. ಎರಡೂ ಸಲ ಪರೀಕ್ಷಿಸಿದಾಗ ಕುಡಿಯಲು ಯೋಗ್ಯವಿರುವ ನೀರು ಎಂದು ವರದಿ ಬಂದಿದೆ. ಆದ್ದರಿಂದ ಸಾರ್ವಜನಿಕರು ಯಾವುದೇ ಆತಂಕವಿಲ್ಲದೇ ಕುಡಿಯಲು ಈ ಎರಡು ಘಟಕಗಳ ನೀರನ್ನು ಬಳಸಬಹುದೆಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈಲರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎಚ್.ಪಿ. ರಜಪೂತ ತಿಳಿಸಿದ್ದಾರೆ.
ನೀರು ಪರೀಕ್ಷಾ ಸಮಯದಲ್ಲಿ ಇಲಾಖೆಯ ಸೆಕ್ಷನ್ ಅಧಿಕಾರ ಜಯದೀಪ್ ಪಾಟೀಲ, ಜೆಇ ಸುಜೀತ್, ಮಿಶ್ರಿಕೋಟಿ ಗ್ರಾಮಪಂಚಾಯತ ಕಾರ್ಯದರ್ಶಿ ಶಂಭುಲಿಂಗಪ್ಪ ಹೊಸಮನಿ, ಗ್ರಾಮಸ್ಥರಾದ ಮುತ್ತು ಪಾಟೀಲ, ಡಾ. ಮಹೇಶ ತಿಮ್ಮಣ್ಣವರ, ಸದಾನಂದ ಅಂಗಡಿ ಸೇರಿದಂತೆ ಇತರರು ಹಾಜರಿದ್ದರು.




