ಬೆಂಗಳೂರು: ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಪೂಜ್ಯರ ಬೇಡಿಕೆಗಳಲ್ಲಿ ಸಾಧ್ಯವಿರುವವುಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಕಾವೇರಿ ನಿವಾಸದಲ್ಲಿ ಲಿಂಗಾಯತ ಸ್ವಾಮೀಜಿಗಳು, ಸಚಿವರು, ಶಾಸಕರು, ಸಮಾಜದ ಮುಖಂಡರ ಭೇಟಿಯಾಗಿ, ಸಮುದಾಯದ ಬೇಡಿಕೆಗಳ ಕುರಿತು ಸಮಾಲೋಚನೆ ನಡೆಸಿ, ಮನವಿಪತ್ರ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಬಸವ ಜಯಂತಿಯಂದೇ ಪ್ರಮಾಣವಚನ ಸ್ವೀಕರಿಸಿದೆ. ಬಸವಣ್ಣನವರ ಭಾವಚಿತ್ರ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯಗೊಳಿಸಿದ್ದು ನಮ್ಮ ಸರ್ಕಾರ ಎಂದರು.
ಬಸವಣ್ಣನವರ ವಿಚಾರ ಮತ್ತು ಹೋರಾಟ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಪೂರಕ. ಜಾತಿವಾದಿ ಪಟ್ಟಭದ್ರರಿಗೆ ಬಸವಣ್ಣನವರ ವಿಚಾರಗಳು ಹಿಡಿಸಲ್ಲ. ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ. ಅದಕ್ಕೆ ಆಂತರಿಕವಾಗಿ ವಿರೋಧಿಸುತ್ತಿದ್ದಾರೆ. ಜಾತಿ ವ್ಯವಸ್ಥೆ ಬಹಳ ಗಟ್ಟಿಯಾಗಿ ಬೇರೂರಿದೆ. ಇದಕ್ಕೆ ಪಟ್ಟಭದ್ರರು ನೀರು, ಗೊಬ್ಬರ ಹಾಕುತ್ತಿದ್ದಾರೆ. ಜಾತ್ಯತೀತ, ಸಮಸಮಾಜ ನಿರ್ಮಾಣ ಮಾಡಲು ಬಸವಣ್ಣನವರ ಹೋರಾಟ ಪೂರಕ ಎಂದರು.
ಗೋರುಚ ಅವರ ಅಧ್ಯಕ್ಷತೆಯಲ್ಲಿ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿದ್ದು ನಾವು. ಅನುಭವ ಮಂಟಪವು ಮೊದಲ ಪ್ರಜಾಪ್ರಭುತ್ವದ ವೇದಿಕೆ. ಯಾರ ಒತ್ತಾಯವೂ ಇಲ್ಲದ ವೇಳೆಯಲ್ಲೇ ನಮ್ಮ ಸರ್ಕಾರ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿತ್ತು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ನಮ್ಮ ಸರ್ಕಾರ ಎಂದರು.




