ಬೆಂಗಳೂರು: ಬಿಜೆಪಿಯಲ್ಲಿ ಉಂಟಾಗಿದ್ದ ಸಣ್ಣಪುಟ್ಟ ಸಮಸ್ಯೆಗಳನ್ನು ಸಂಘ ಪರಿವಾರದ ನಾಯಕರು ಪರಿಹರಿಸಿದ್ದಾರೆ. ಸದ್ಯಕ್ಕೆ ನಮಲ್ಲಿ ಯಾವುದೇ ಗೊಂದಲ, ಭಿನ್ನಾಭಿಪ್ರಾಯಗಳಿಲ್ಲ ಎಂದು ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಸಭೆ ಬಳಿಕ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ ಎಂದು ಪರಿವಾರದ ನಾಯಕರಿಗೆ ನಮ ತೀರ್ಮಾನವನ್ನು ತಿಳಿಸಿದ್ದೇವೆ. ನಮಲ್ಲಿ ಗೊಂದಲ ಮತ್ತು ಭಿನ್ನಾಭಿಪ್ರಾಯಗಳು ಇಲ್ಲವೇ ಇಲ್ಲ. ನಾಯಕತ್ವ ಪ್ರಶ್ನೆಯೂ ಉದ್ಭವಿಸುವುದಿಲ್ಲ ಎಂದರು.
ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಪಾದಯಾತ್ರೆಗೆ ತೀರ್ಮಾನವನ್ನು ಹೈಕಮಾಂಡ್ ಮಾಡುತ್ತದೆ. ಪಾದಯಾತ್ರೆ ನಡೆಯುತ್ತದೆ. ನಮ್ಮ ಜೊತೆಗೆ ಎಲ್ಲರೂ ಬರ್ತಾರೆ ಎಂದರು.
ಎಸ್ಪಿಟಿಎಸ್ಪಿಯ 14 ಸಾವಿರ ಕೋಟಿ ಹಣವನ್ನು ಗ್ಯಾರಂಟಿ ಗಳಿಗೆ ಬಳಸಿದ್ದಾರೆ. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಹಂಚಿದ್ದಾರೆ. ಇದೊಂದು ಕ್ರಿಮಿನಲ್ ಹಾಗೂ ಅಕ್ಷಮ್ಯ ಅಪರಾಧ. ಅದಕ್ಕೆ ನಾವೆಲ್ಲರೂ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದರು.




