ಬೆಂಗಳೂರು: ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ. 15 ರಷ್ಟು ಮೀಸಲಾತಿ ನೀಡುವ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಇದು ಕೇಂದ್ರ ಸರ್ಕಾರದ ಮಾದರಿ ನಾವು ಅದನ್ನೇ ಅನುಸರಿಸಿದ್ದೇವೆ ಎಂದು ಅನುಸರಿಸಿದ್ದೇವೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿರುಗೇಟು ನೀಡಿದ್ದಾರೆ.
ರಾಜ್ಯದ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ. 15 ರಷ್ಟು ಮೀಸಲು ನಿರ್ಧಾರ ಈಗ ಕೈಗೊಂಡ ತೀರ್ಮಾನವಲ್ಲ. 2019ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಕೈಗೊಂಡ ನಿರ್ಧಾರವಾಗಿದೆ ಎಂದರು.
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
- ಸರ್ವಜನಾಂಗದ ಶಾಂತಿಯ ತೋಟವೇ ನಮ್ಮ ಗುರಿ: ಸಿದ್ದರಾಮಯ್ಯ
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಇಂತಹ ಶಿಫಾರಸ್ಸು ಮಾಡಿತ್ತು ಎಂದರು.
ಸಾಚಾರ್ ಸಮಿತಿ ವರದಿ ಪ್ರಕಾರ ಕೇಂದ್ರ ಸರ್ಕಾರದಲ್ಲಿ ಈಗಾಗಲೇ ವಸತಿ ಯೋಜನೆಗಳಲ್ಲಿ ಶೇ. 15 ರಷ್ಟು ಮೀಸಲಾತಿ ಅಲ್ಪಸಂಖ್ಯಾತ ಸಮುದಾಯಕ್ಕೆ ಇದೆ. ಅದೇ ರೀತಿ ರಾಜ್ಯದಲ್ಲೂ ನೀಡಬೇಕು ಎಂಬ ಬೇಡಿಕೆ ಇತ್ತು. ಹೀಗಾಗಿ ಕೇಂದ್ರದ ಮಾದರಿಯನ್ನೇ ಅನುಸರಿಸಲಾಗಿದೆ ಎಂದರು.
2019 ರಲ್ಲಿ ಎಚ್. ಡಿ. ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು. ಇದೀಗ ಸಂಪುಟದ ಮುಂದೆ ಬಂದು ಒಪ್ಪಿಗೆ ದೊರೆತಿದೆ. ಈಗಾಗಲೇ ಇದ್ದ ಶೇ. 10 ರಷ್ಟು ಮೀಸಲಾತಿ ಪ್ರಮಾಣ ಶೇ. 15 ಕ್ಕೆ ಹೆಚ್ಚಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯದಲ್ಲಿ ಹೆಚ್ಚಿನ ಬಡ ಕುಟುಂಬಗಳಿದ್ದು ವಸತಿ ರಹಿತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬೇಡಿಕೆ ಇತ್ತು ಎಂದರು.
2021 ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ಸಹ ಶೇ. 15 ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ತಿಳಿಸಿತ್ತು. ಇದೆಲ್ಲ ವಾಸ್ತವ ಅಂಶ ತಿಳಿಯದೆ ಪ್ರತಿಪಕ್ಷ ಗಳು ಅನಗತ್ಯ ಟೀಕೆ ಗಳು ಮಾಡುತ್ತಿರುವುದು ಶೋಭೆ ತರುವುದಿಲ್ಲ ಎಂದರು.




