ಬೆಂಗಳೂರು: ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು – ಸಿಇಒ – ಎಸ್‌ಪಿ ಗಳು ಸಮನ್ವಯದಿಂದ, ಎಲ್ಲ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದರೆ ಅಭಿವೃದ್ಧಿ ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಕಲಾಗ್ರಾಮದಲ್ಲಿ ಸ್ಪರ್ಶ ಮಕ್ಕಳ ನಾಟಕೋತ್ಸವ
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
ಸತತ ಎರಡು ದಿನಗಳ ಕಾಲ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಭೆಯ ಕೊನೆಯಲ್ಲಿ ಈ ಎರಡು ದಿನಗಳ ಚರ್ಚೆಯಲ್ಲಿ ನನ್ನ ಅನುಭವಕ್ಕೆ ಬಂದ ಲೋಪದೋಷಗಳನ್ನು ಸರಿಪಡಿಸುವ ಮತ್ತು ಉತ್ತಮ ಅಂಶಗಳನ್ನು ಮುಂದುವರೆಸಿಕೊಂಡು ಹೋಗುವ ಬಗ್ಗೆ ಮಾತನಾಡಿದ ಅವರು, ಸರ್ಕಾರ ಸಮಾಜದ ಅಸಮಾನತೆ ತೊಡೆದು ಹಾಕುವ ಉದ್ದೇಶದಿಂದ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು ಎಂದರು.
ಸರ್ಕಾರದ ಹಣ ದುರುಪಯೋಗ ಆಗದಂತೆ ಕೆಲಸ ಮಾಡಬೇಕು. ಅರ್ಹ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಬೇಕು. ಚರ್ಚೆ ಸಂದರ್ಭದಲ್ಲಿ ಹಲವು ಲೋಪದೋಷಗಳ ಕುರಿತು ಪ್ರಸ್ತಾಪಿಸಲಾಗಿದ್ದು, ಇವುಗಳನ್ನು ಸರಿಪಡಿಸಿಕೊಂಡು ಹೋಗಬೇಕು ಎಂದು ಸೂಚಿಸಿದರು.
ಉದ್ದೇಶಪೂರ್ವಕವಾಗಿ ಇಂತಹ ಲೋಪ ದೋಷಗಳನ್ನು ಮುಂದುವರೆಸಿದರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು
ನಾವೆಲ್ಲರೂ ಸರ್ಕಾರದ ಸೇವಕರು. ಅದಕ್ಕೆ ವಿಧಾನಸೌಧದಲ್ಲಿ ಕೆಂಗಲ್ ಹನುಮಂತಯ್ಯನವರು ಸರ್ಕಾರದ ಕೆಲಸ ದೇವರ ಕೆಲಸ ಎಂದು ಬರೆಸಿದ್ದಾರೆ. ನಾವು ಸಮಾಜವನ್ನು, ಸಮಾಜದಲ್ಲಿರುವ ಅಸಮಾನತೆಯ ಕಾರಣವನ್ನು ಅರ್ಥ ಮಾಡಿಕೊಂಡು, ನಮ್ಮ ಜನಪರ ಯೋಜನೆಗಳನ್ನು ಚಾಚೂ ತಪ್ಪದೆ ಅನುಷ್ಠಾನಗೊಳಿಸಬೇಕು ಎಂದರು.
ಉದಾಹರಣೆಗೆ ಗ್ಯಾರಂಟಿ ಯೋಜನೆಗಳು ಮಧ್ಯವರ್ತಿಗಳ ಹಾವಳಿಯಿಲ್ಲದೆ ಜಾರಿಯಾಗಿವೆ. ಇತರ ಕೆಲವು ಕಾರ್ಯಕ್ರಮಗಳಲ್ಲಿ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಬೇಕು. ಈಗಾಗಲೇ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಾಗಿದೆ. ನೀವೆಲ್ಲರೂ ಸೇರಿ ಜಿಲ್ಲೆಯ ಅಭಿವೃದ್ಧಿ ಕುರಿತು ಚಿಂತನೆ ನಡೆಸಬೇಕು ಎಂದರು.
ಜನಪರ ಕಾರ್ಯಕ್ರಮಗಳನ್ನು ನಾವು – ನೀವು ಎಲ್ಲಾ ಚಾಚೂ ತಪ್ಪದೆ ಅನುಷ್ಠಾನಗೊಳಿಸಬೇಕು. ಏಕೆಂದರೆ ಜನರ ತೆರಿಗೆ ಹಣದಿಂದ ನಾವೆಲ್ಲರೂ ಇದ್ದೇವೆ. ಅವರ ಋಣ ತೀರಿಸಬೇಕು ಎಂದರು.
ಸಮಾಜದ ಋಣ ನಮ್ಮ ಮೇಲಿದೆ ಎಂಬುದನ್ನು ಅರಿತು ಕೆಲಸ ಮಾಡಬೇಕು. ಮೂರು ತಿಂಗಳ ನಂತರ ಮತ್ತೆ ಸಭೆ ನಡೆಸಲಾಗುವುದು. ಆಗ ಸುಧಾರಣೆಯಾಗದಿದ್ದರೆ ಸಹಿಸಲಾಗದು ಎಂದರು.




