ಶಿವಮೊಗ್ಗ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 100%ರಷ್ಟು ಫಲಿತಾಂಶವನ್ನು ಸಾಧಿಸಿರುವ ಶಾಲೆಗಳನ್ನು ಅಭಿನಂದಿಸಲು ಅತ್ಯಂತ ಹೆಮ್ಮೆಯಾಗುತ್ತಿದೆ. ಇದು ಕೇವಲ ಅಂಕಗಳ ಸಾಧನೆ ಮಾತ್ರವಲ್ಲ, ಶಿಸ್ತು, ಶ್ರಮ, ಸಮರ್ಪಣೆ ಮತ್ತು ತಂಡದ ಕೆಲಸದ ಪ್ರತಿಫಲವಾಗಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
2022-23 ಮತ್ತು 2023-24ನೇ ಸಾಲಿನಲ್ಲಿ 10ನೇ ತರಗತಿಯಲ್ಲಿ ಶೇ100% ಫಲಿತಾಂಶ ಪಡೆದು ಸಾಧನೆ ಮಾಡಿದ ಶಾಲೆಗಳ ಮುಖ್ಯ ಶಿಕ್ಷಕರಿಗೆ ಶಿವಮೊಗ್ಗದ ಡಿ.ವಿ.ಎಸ್ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ “ಅಭಿನಂದನಾ ಸಮಾರಂಭ”ವನ್ನು ಉದ್ಘಾಟಿಸಿ, ಮಾತನಾಡಿದರು.
100%ರಷ್ಟು ಫಲಿತಾಂಶವ ಮಹತ್ವದ ಸಾಧನೆಯ ಹಿಂದೆ ಇರುವವರು ನಮ್ಮ ಅದ್ಭುತ ಶಿಕ್ಷಕರು ತಮ್ಮ ಜ್ಞಾನ, ಸಮಯ, ತ್ಯಾಗ ಮತ್ತು ಪ್ರೇರಣೆಯನ್ನು ವಿದ್ಯಾರ್ಥಿಗಳಿಗೆ ಅರ್ಪಿಸಿದ್ದಾರೆ. ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಶಿಲ್ಪಿಗಳು. ಇವರ ಜೊತೆಗೆ ಪೋಷಕರ ಪಾತ್ರವೂ ಅತ್ಯಂತ ಮಹತ್ವದಾಗಿದ್ದು ಅವರೆಲ್ಲರ ಪರಿಶ್ರಮಕ್ಕೆ ನನ್ನ ಅಭಿನಂದನೆಗಳನ್ನು ತಿಳಿಸಿ, ಆಯ್ಕೆಯಾದ ಶಾಲೆಗಳ ಮುಖ್ಯ ಶಿಕ್ಷಕರಿಗೆ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು ಎಂದರು.
ಶಿಕ್ಷಣಕ್ಕೆ ಆದ್ಯತೆ ನೀಡಿದರೆ ಯಶಸ್ಸು ಸಾಧ್ಯ. ಈ ಯಶಸ್ಸು ಮುಂದಿನ ವರ್ಷಗಳಲ್ಲೂ ನಿರಂತರವಾಗಿರಲಿ, ಇನ್ನಷ್ಟು ಪ್ರತಿಭೆಗಳು ಹೊರಹೊಮ್ಮಲಿ ಎಂದು ಹಾರೈಸುತ್ತಾ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಜಿ.ಪಂ ಸಿಇಒ ಹೇಮಂತ್, ಭೋವಿ ನಿಗಮದ ಮಾಜಿ ಅಧ್ಯಕ್ಷ ಎನ್ ರವಿಕುಮಾರ್, ವಿಧಾನಪರಿಷತ್ ಮಾಜಿ ಸದಸ್ಯ ಆರ್. ಪ್ರಸನ್ನ ಕುಮಾರ್, ಡಿಡಿಪಿಐ ಮಂಜುನಾಥ್, ಜಿಲ್ಲಾ ಗ್ಯಾರೆಂಟಿ ಯೋಜನೆ ಅಧ್ಯಕ್ಷ ಚಂದ್ರ ಭೋಪಾಲ್ ಸೇರಿದಂತೆ ಅನೇಕ ಗಣ್ಯರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.














