ಮಧ್ಯರಾತ್ರಿ ಬಂದ ಸ್ವಾತಂತ್ರ್ಯವನ್ನು ಹಗಲಿರುಳೂ ಕಾಯಬೇಕು: ಬೊಮ್ಮಾಯಿ

5 years ago

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಇಡೀ ವರ್ಷ ಆಚರಿಸೋಣ. ಮಧ್ಯರಾತ್ರಿ ಬಂದ ಸ್ವಾತಂತ್ರ್ಯವನ್ನು ನಾವು ಹಗಲಿರುಳು ಕಾಯಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಕರೆ ನೀಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ವಿಧಾನಸೌಧದ ಆವರಣದಲ್ಲಿ ಆಯೋಜಿಸಿದ್ದ ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಮಾರಂಭಕ್ಕೆ ಅವರು‌ ಚಾಲನೆ ನೀಡಿದರು.

ಈ ವೇಳೆ‌ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನರಂಜಿಸಿದವು.  ಆರೋಗ್ಯ ಸಚಿವ ಸುಧಾಕರ್, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮ, ರಜನೀಶ್ ಗೋಯಲ್, ಮಂಜುನಾಥ್ ಪ್ರಸಾದ್, ಡಾ.ಶಾಲಿನಿರಜನೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ ಮೊದಲಾದವರು ಹಾಜರಿದ್ದರು.

Leave a Reply