ಬೆಂಗಳೂರು: ರಾಜ್ಯದಲ್ಲಿ 2028ರವರೆಗೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಮಾಡಲು ಹೈಕಮಾಂಡ್‌ನಿಂದ ಮಾತ್ರ ಸಾಧ್ಯ. ಹೈಕಮಾಂಡ್, ಬೀದಿ ದಾಸಯ್ಯನನ್ನು ಮುಖ್ಯಮಂತ್ರಿ ಮಾಡಿದರೂ ನಾವು ಒಪ್ಪುತ್ತೇವೆ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯದಲ್ಲಿ ನಾವು ನಮ್ಮ ಅಭಿಪ್ರಾಯ ಹೇಳಿದ್ದೇವೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಿದರೂ ಸ್ವಾಗತ ಎಂದರು.
ನವೆಂಬರ್ ಕ್ರಾಂತಿ ಆಗುತ್ತದೆ ಬಿಜೆಪಿಯವರು ಹೇಳಿದ್ದರು. ಈಗ ಸಂಕ್ರಾಂತಿ ಹಬ್ಬವೂ ಮುಗಿದಿದೆ. ಅವರು ಯುಗಾದಿ ಹಬ್ಬಕ್ಕೆ ಕಾಯುತ್ತಿದ್ದಾರೆ. ಆದರೆ, ಏನೂ ಆಗುವುದಿಲ್ಲ ಎಂದರು.




