ಬೆಂಗಳೂರು: ಬಾಬು ಜಗಜೀವನ್ ರಾಮ್ ಸ್ವಾತಂತ್ರ್ಯ ಪ್ರೇಮಿ, ಸಾಮಾಜಿಕ ನ್ಯಾಯದ ಪರವಾಗಿದ್ದವರು. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಇದೆ. ಜಾತಿ ಇರುವವರೆಗೂ ಮೀಸಲಾತಿ ಇರಬೇಕು ಎಂದು ಸ್ಪಷ್ಟವಾದ ನಿಲುವು ಹೊಂದಿದ್ದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಆಯೋಜಿಸಿದ್ದ ಡಾ.ಬಾಬು ಜಗಜೀವನ ರಾಮ್ ಅವರ 118 ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿಯವರು EWS ಹೆಸರಲ್ಲಿ ಶೇ10 ಮೀಸಲಾತಿ ಕಲ್ಪಿಸಿದ ಬಳಿಕ ಎಲ್ಲರೂ ಮೀಸಲಾತಿ ಫಲಾನುಭವಿಗಳೇ ಆಗಿಬಿಟ್ಟಿದ್ದಾರೆ. ಮೀಸಲಾತಿ ವಿರುದ್ಧ ಮಾತಾಡುತ್ತಿದ್ದವರೆಲ್ಲಾ ಈಗ ಮೀಸಲಾತಿ ಪಡೆದು ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಈಗ ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ ಎಂದರು.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಸುಪ್ತ ಪ್ರತಿಭೆ ಹೊರಗೆ ತರುವ ಶಿಕ್ಷಣದಿಂದ ಯುವ ಸಮೂಹ ಸ್ವಾಭಿಮಾನಿಗಳಾಗಿ ಬೆಳೆಯಲು ಸಾಧ್ಯ. ನಮ್ಮ ರಾಜ್ಯದಲ್ಲಿ ಮತ್ತು ತೆಲಂಗಾಣ, ಆಂಧ್ರದಲ್ಲಿ ಮಾತ್ರ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಕಾಯ್ದೆ ಜಾರಿಯಲ್ಲಿದೆ. ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವ ಬಿಜೆಪಿ ಅವರ ಆಡಳಿತದ ರಾಜ್ಯಗಳಲ್ಲಿ ಈ ಕಾಯ್ದೆ ತಂದೇ ಇಲ್ಲ ಏಕೆ? ಬರೀ ಭಾಷಣ ಮಾಡಿದರೆ ಸಾಕಾ, ಅದು ಕ್ರಿಯೆಯಲ್ಲಿ ಕಾಣಬಾರದಾ? ಎಂದು ಪರೋಕ್ಷವಾಗಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು.
ನಾವು ಜಾರಿ ಮಾಡಿರುವ ಐದೂ ಗ್ಯಾರಂಟಿಗಳೂ ಜನರ ಕೈಯಲ್ಲಿ ಹಣ ಇರಬೇಕು, ಕೊಳ್ಳುವ ಶಕ್ತಿ ಹೆಚ್ಚಾಗಬೇಕು ಎನ್ನುವ ನಮ್ಮ ಉದ್ದೇಶವನ್ನು ಯಶಸ್ವಿಯಾಗಿ ಈಡೇರಿಸಿವೆ ಎಂದು ಪುನರುಚ್ಚರಿಸಿದರು.
ಜಾತಿ ಸೃಷ್ಟಿಸಿದವರು ನಾವಲ್ಲ. ಆದರೆ ಈ ಜಾತಿಯ ಅಸಮಾನತೆಗೆ ಬಲಿ ಆಗಿರುವವರು ನಾವು. ಜಾತಿ ಇರುವವರೆಗೂ ಸಮಾನ ಅವಕಾಶಗಳು ಸಿಗುವುದಿಲ್ಲ. ಏಕೆಂದರೆ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ ಎಂದರು.
ಬಾಬು ಜಗಜೀವನ್ ರಾಮ್ ಅವರು ಕೇಂದ್ರ ಸಚಿವರಾಗಿ ಹಸಿರು ಕ್ರಾಂತಿ ಮಾಡಿ ಎಲ್ಲರಿಗೂ ಆಹಾರ ಸಿಗುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನಮಗೆಲ್ಲಾ ಹಬ್ಬದ ದಿನ ಮಾತ್ರ ಅನ್ನ ಸಿಗುತ್ತಿತ್ತು. ಈ ಪರಿಸ್ಥಿತಿ ಯಾರಿಗೂ ಬರಬಾರದು, ಯಾರೂ ಹಸಿವಿನಿಂದ ಮಲಗಬಾರದು ಎನ್ನುವ ಉದ್ದೇಶದಿಂದ ಅನ್ನ ಭಾಗ್ಯ ಜಾರಿ ಮಾಡಿದೆ ಎಂದರು.
ಜಗಜೀವನ್ ರಾಮ್ ಮತ್ತು ಅಂಬೇಡ್ಕರ್ ಇಬ್ಬರಿಗೂ ಸಮಾಜದ ಕಷ್ಟ ಗೊತ್ತಿತ್ತು. ಈ ಕಷ್ಟಗಳಿಗೆ ಪರಿಹಾರ ಕಂಡುಕೊಳ್ಳುವ ಮಾರ್ಗವಾಗಿ ಸಂವಿಧಾನ ಬಂತು, ನಮಗೆಲ್ಲಾ ಶಿಕ್ಷಣ ಸಿಕ್ಕಿತು. ಮತ್ತೊಬ್ಬ ಅಂಬೇಡ್ಕರ್, ಜಗ ಜೀವನ್ ರಾಮ್ ನಮಗೆ ಸಿಗುವುದಿಲ್ಲ. ಹೀಗಾಗಿ ಇವರು ಬಿಟ್ಟು ಹೋಗಿರುವ ಚಿಂತನೆ ಮತ್ತು ಕಾಳಜಿಗಳನ್ನು ಪಾಲಿಸಬೇಕು ಎಂದರು.
ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ. ಜಾರಿ ಮಾಡೇ ಮಾಡುತ್ತೇವೆ. ನೀವು ಬೇಡ ಅಂದರೂ ನಾವು ಜಾರಿ ಮಾಡುತ್ತೇವೆ. ಸುಪ್ರೀಂಕೋರ್ಟ್ ಆದೇಶವನ್ನು ನಾವು ಶತಪ್ರತಿಶತ ಪಾಲಿಸುತ್ತೇವೆ. ನಾಗಮೋಹನ್ ದಾಸ್ ಅವರು ಎರಡು ತಿಂಗಳ ಕಾಲಾವಧಿ ಕೇಳಿದ್ದಾರೆ, ನಾವು ಕೊಟ್ಟಿದ್ದೇವೆ. ಬಳಿಕ ಯಾರಿಗೂ ಅನ್ಯಾಯ ಆಗದಂತೆ ಜಾರಿ ಮಾಡುತ್ತೇವೆ ಎಂದು ಇದೇ ವೇಳೆ ಭರವಸೆ ನೀಡಿದರು.




