ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಮನವಿಗೆ ಓಗೊಟ್ಟು, ಹಿಂಸಾ ಮಾರ್ಗದ ನಕ್ಸಲೀಯ ಚಳುವಳಿ ಬಿಟ್ಟು ಸಮಾಜದ ಮುಖ್ಯ ವಾಹಿನಿ ಪ್ರವೇಶಿಸುವ ಉದ್ದೇಶದೊಂದಿಗೆ ಶರಣಾದ ನಕ್ಸಲರ ಆಯುಧಗಳ ಬಗ್ಗೆ ಎದ್ದಿದ್ದ ವಿವಾದ ತಣ್ಣಗಾಗಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ನಕ್ಸಲ್ ಚಳವಳಿಯಲ್ಲಿ ಸಕ್ರಿಯರಾಗಿದ್ದು ಶರಣಾದ ಆರು ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚಿ ಅವುಗಳನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಪ್ಪ ತಾಲೂಕಿನ ಮೇಗೂರು ಅರಣ್ಯದಲ್ಲಿ ಹೂತು ಇಡಲಾಗಿದ್ದ AK 56 ಗನ್, ರಿವಾಲ್ವಾರ್, ಬಂದೂಕು ಸೇರಿದಂತೆ 6 ಶಸ್ತ್ರಾಸ್ತ್ರಗಳನ್ನು ಚಿಕ್ಕಮಗಳೂರು ಪೊಲೀಸರು ಜಪ್ತಿ ಮಾಡಿದ್ದಾರೆ.
ನಕ್ಸಲರು ಶರಣಾಗತಿಗೂ ಮುನ್ನ ಮೇಗೂರು ಅರಣ್ಯದಲ್ಲಿ ಅಡಗಿದ್ದರು. ಶರಣಾಗುವ ದಿನ ಮೇಗೂರು ಅರಣ್ಯದಲ್ಲೇ ಕೊನೆಯಬಾರಿಗೆ ಸಭೆ ನಡೆಸಿದ್ದರು. ಬಳಿಕ ಸಿಎಂ ಸಿದ್ದರಾಮಯ್ಯ ಅವರ ಮುಂದೆ ಶರಣಾಗಿದ್ದರು.
ಶರಣಾಗತಿ ವೇಳೆ ಶಸ್ತ್ರಾಸ್ತ್ರ ಹಸ್ತಾಂತರವಾಗದ ಬಗ್ಗೆ ಚರ್ಚೆ ಶುರುವಾಗಿತ್ತು. ಈ ಹಿನ್ನೆಲೆಯಲ್ಲಿ ಕೊಪ್ಪ ಠಾಣೆ ಇನ್ಸ್ ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಕಳೆದ ಎರಡು ದಿನಗಳಿಂದ ಹುಡುಕಾಟ ನಡೆಸಿ ಶಸ್ತ್ರಾಸ್ತ್ರಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ.
ನಕ್ಸಲರು ಕೊನೆಯಬಾರಿಗೆ ಸಭೆ ನಡೆಸಿದ್ದ ಸ್ಥಳದಲ್ಲೇ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ದೊರೆತಿದೆ. ಈ ಬಗ್ಗೆ ಶರಣಾದ ನಕ್ಸಲರು ಕೂಡ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದರ ಆಧಾರದಲ್ಲಿ ಪೊಲೀಸರು ಒಂದು AK 56, ಮೂರು 303 ರೈಫಲ್, ಒಂದು 12 bore SBBL, ಒಂದು ಕಂಟ್ರಿ ಮೇಡ್ ಪಿಸ್ತೂಲ್ ಸೇರಿಂದತೆ ಒಟ್ಟು 6 ಬಂದೂಕು ಪತ್ತೆ ಹಚ್ಚಿದ್ದಾರೆ.
ಜೊತೆಗೆ ಹನ್ನೊಂದು 7.62ಎಂಎಂ AK ammunitions, 303 ಬಂದೂಕಿನ 133 ಗುಂಡುಗಳು ಸೇರಿದಂತೆ 176 ಜೀವಂತ ಗುಂಡುಗಳು ಪತ್ತೆಯಾಗಿವೆ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ 25(1ಬಿ), 7 ಮತ್ತು 25(1ಎ) ಶಸ್ತ್ರಾಸ್ತ್ರ ಕಾಯ್ದೆ 1959 ಅಡಿ ಪ್ರಕರಣ ದಾಖಲಿಸಲಾಗಿದೆ.




