ಬಿಜೆಪಿಯ 25 ಮಂದಿ ಸಂಸದರು ಏನು ಮಾಡುತ್ತಿದ್ದಾರೆ?: ಕೆಪಿಸಿಸಿ

3 years ago

#BJP #MP #doing #KPCC

ಬೆಂಗಳೂರು: ಬಿಜೆಪಿಯ 25 ಮಂದಿ ಸಂಸದರು ಏನು ಮಾಡುತ್ತಿದ್ದಾರೆ? ರಾಜ್ಯಕ್ಕೆ ಆಗಿರುವ ಅನ್ಯಾಯ ಪ್ರಶ್ನಿಸುವುದು ಅವರ ಜವಾಬ್ದಾರಿ ಅಲ್ಲವೇ? ಎಂದು ಕೆಪಿಸಿಸಿ ಪ್ರಶ್ನಿಸಿದೆ.

ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಪ್ರಕಟವಾದ ವರದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಕೆಪಿಸಿಸಿ, 23 ಇಲಾಖೆಗಳ 61 ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಪ್ರಸಕ್ತ ವರ್ಷ ಕೇಂದ್ರ ಸರ್ಕಾರ ನಯಾ ಪೈಸೆ ಅನುದಾನವನ್ನೂ ಬಿಡುಗಡೆ ಮಾಡಿಲ್ಲ ಎಂದು ಹೇಳಿದೆ.

ಕಳೆದ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ J.P.Nadda ಅವರು, ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ “ಕೇಂದ್ರದ ಅನುದಾನ ನಿಲ್ಲಲಿದೆ” ಎಂದು ಬೆದರಿಕೆ ಹಾಕಿದ್ದರು, ಇಂದು ಅದೇ ಬೆದರಿಕೆಯಂತೆ ನಡೆದುಕೊಳ್ಳುತ್ತಿದೆಯೇ ಕೇಂದ್ರ ಸರ್ಕಾರ? ಎಂದು ಪ್ರಶ್ನಿಸಿದೆ.

ಕೇಂದ್ರದಲ್ಲಿ , ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಡಬಲ್ ಇಂಜಿನ್ ನಂತೆ ಕೆಲಸ ಮಾಡುತ್ತೇವೆ, ಸ್ವರ್ಗವನ್ನೇ ಧರೆಗೆ ಇಳಿಸುತ್ತೇವೆ ಎಂದು ಹೇಳಿ ಬಿಜೆಪಿ ಕೇಂದ್ರ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿತು, ಕರ್ನಾಟಕದ ಮತದಾರರು ಬಿಜೆಪಿಯಿಂದ 25 ಮಂದಿ ಸಂಸದರನ್ನು ಗೆಲ್ಲಿಸಿ ಕಳಿಸಿದರು. ಕರ್ನಾಟಕದಿಂದ ಆಯ್ಕೆಯಾದ BJP Karnataka ಯ 25 ಮಂದಿ ಸಂಸದರ ಕೆಲಸವೇನು? ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಕೊಡದಿದ್ದರೂ ಅದನ್ನು ಏಕೆ ಕೇಳುತ್ತಿಲ್ಲ? ಕರ್ನಾಟಕಕ್ಕೆ ಆಗುತ್ತಿರುವ ಈ ಅನ್ಯಾಯವನ್ನು ಏಕೆ ಪ್ರಶ್ನಿಸುತ್ತಿಲ್ಲ? ಎಂದು ಪ್ರಶ್ನಿಸಿದೆ.

ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕರ್ನಾಟಕದ ಜನರ ಹಿತ ರಕ್ಷಣೆ ಮುಖ್ಯವಲ್ಲವೇ? ಕರ್ನಾಟಕವೂ ಈ ದೇಶದ ಭಾಗವಲ್ಲವೇ? ಕರ್ನಾಟಕದಿಂದ 25 ಮಂದಿ ಸಂಸದರನ್ನು ಗೆಲ್ಲಿಸಿ ಕಳಿಸಿದ್ದರೂ ನರೇಂದ್ರ ಮೋದಿ ಸರ್ಕಾರಕ್ಕೆ ಈ ರಾಜ್ಯದ ಬಗ್ಗೆ ಇಷ್ಟೊಂದು ತಿರಸ್ಕಾರವೇಕೆ? ಎಂದಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಜನಾದೇಶ ನೀಡಿದರು ಎನ್ನುವ ಕಾರಣಕ್ಕಾಗಿ ಕರ್ನಾಟಕದ ಮೇಲೆ ದ್ವೇಷ ಸಾಧಿಸಲಾಗುತ್ತಿದೆಯೇ? ಈ ರೀತಿ ದ್ವೇಷ ಸಾಧಿಸುವ Narendra Modi ಅವರು ವಾಜಪೇಯಿಯವರು ಹೇಳಿದ್ದ “ರಾಜಧರ್ಮ”ದ ಪಾಠವನ್ನು ನೆನಪಿಸಿಕೊಳ್ಳಲಿ ಎಂದು ಹೇಳಿದೆ.

Leave a Reply