ಬೆಳಗಾವಿ: ಕುಟುಂಬದ ವಾರ್ಷಿಕ ಆದಾಯ ರೂ. 1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳನ್ನು ಬಿಪಿಎಲ್ ಪಡಿತರ ಚೀಟಿಯಿಂದ ಹೊರಗಿಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ ಎಚ್ ಮುನಿಯಪ್ಪ ಹೇಳಿದರು.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಬಿಜೆಪಿಯ ರಾಜೀವ್ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಆಹಾರ ಸಚಿವ ಕೆ ಎಚ್ ಮುನಿಯಪ್ಪ, ರಾಜ್ಯದಲ್ಲಿ ಯಾವುದೇ ಅರ್ಹ ಫಲಾನುಭವಿಗಳ ಬಿಪಿಎಲ್ ಕಾರ್ಡುಗಳನ್ನು ರದ್ದುಪಡಿಸುವುದಿಲ್ಲ ಎಂದು ಸ್ಪಷ್ಟೀಕರಣ ನೀಡಿದರು.
ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಆದಾಯ ತೆರಿಗೆ ಪಾವತಿಸುವವರು ಮತ್ತು ಸರ್ಕಾರಿ ಉದ್ಯೋಗಿಗಳ ಬಿಪಿಎಲ್ ಕಾರ್ಡುಗಳನ್ನು ರದ್ದುಪಡಿಸಲಾಗುತ್ತಿದೆ ಎಂದರು.
ಬಿಪಿಎಲ್ ಕಾರ್ಡುಗಳನ್ನು ವಿತರಿಸಲು ರಾಜ್ಯ ಸರ್ಕಾರದಿಂದ 2017ರಲ್ಲಿ ಕೆಲವು ನಿಯಮಗಳನ್ನು ರೂಪಿಸಲಾಗಿದೆ. ಇದರ ಅನ್ವಯ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳ ನೌಕರರು ಬಿಪಿಎಲ್ ಕಾರ್ಡ ಪಡೆಯುವಂತಿಲ್ಲ. ಇದರೊಂದಿಗೆ ಆದಾಯ ತೆರಿಗೆ, ಸೇವಾ ತೆರಿಗೆ, ಜಿಎಸ್ಟಿ, ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು ಸಹ ಬಿಪಿಎಲ್ ನಡಿ ಬರುವುದಿಲ್ಲ ಎಂದರು.
ಗ್ರಾಮೀಣ ಪ್ರದೇಶಗಳಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ, ನಗರ ಪ್ರದೇಶಗಳಲ್ಲಿ 1,000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆ ಹೊಂದಿರುವವರು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವವರು, ಕುಟುಂಬದ ವಾರ್ಷಿಕ ಆದಾಯವು ರೂ. 1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳನ್ನು ಬಿಪಿಎಲ್ ಪಡಿತರ ಚೀಟಿಯಿಂದ ಹೊರಗಿಡಲಾಗುವುದು ಎಂದರು.



