ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮಾಜಿ ಸಚಿವ ಕೆ ಎನ್ ರಾಜಣ್ಣ ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಿದ್ದಾರೆ. ಅವರ ಪೋಸ್ಟ್ ನ ಪೂರ್ಣ ಪಾಠ ಇಲ್ಲಿದೆ:
- ಕಸಾಪ ಪರಂಪರೆ ಮರು ಸ್ಥಾಪಿಸುವ ಪ್ರಯತ್ನ
- ಶಿಥಿಲಗೊಂಡ ಕಟ್ಟಡ, ಗೋಡೆಗಳ ಮಾಹಿತಿ ನೀಡಲು ಸಾರ್ವಜನಿಕರಿಗೆ ಮನವಿ: ಬಳ್ಳಾರಿ ಮಹಾನಗರ ಪಾಲಿಕೆ
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
“ಆತ್ಮೀಯ ಹಾಗೂ ಅಭಿಮಾನಿ ಬಂಧುಗಳಲ್ಲಿ ನನ್ನದೊಂದು ಕೋರಿಕೆ”
ಆತ್ಮೀಯರೇ..
ರಾಜಕೀಯ ಏರುಪೇರುಗಳು ನನಗೆ ಹೊಸತಲ್ಲ. ಯಾವುದೇ ರಾಜಕೀಯ ಬದಲಾವಣೆಗೂ ಎಂದೂ ಧೃತಿಗೆಟ್ಟವನಲ್ಲ, ಇದು ಸಹ ಹಾಗೆಯೇ ಎಂದು ಹೇಳಲು ಇಚ್ಛಿಸುತ್ತೇನೆ. ನಿಮ್ಮಲ್ಲಿ ನನ್ನ ವಿನಂತಿ ಏನೆಂದರೆ, ಯಾವುದೇ ಕಾರಣಕ್ಕೂ ಅಭಿಮಾನದ ಅತಿರೇಕದಲ್ಲಿ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಕೆಲವು ಯುವಜನರು ಅಹಿತಕರವಾಗಿ ತಮಗೆ ತಾವು ನೋವು ಮಾಡಿಕೊಂಡಿದ್ದು ನನ್ನ ಮನಸ್ಸಿಗೆ ದುಃಖ ತಂದಿದೆ. ನಿಮ್ಮನ್ನು ನಂಬಿಕೊಂಡು ನಿಮ್ಮ ಕುಟುಂಬಗಳು ಮನೆಯಲ್ಲಿ ಕಾಯುತ್ತಿರುತ್ತಾರೆ. ನಾನು ಸಹ ನಿಮ್ಮನ್ನು ನನ್ನ ಕುಟುಂಬವೆಂದೇ ಭಾವಿಸಿದ್ದೇನೆ. ನಿಮ್ಮ ಪ್ರೀತಿ, ಅಭಿಮಾನ ಎಂತಹದ್ದು ಎಂಬುದನ್ನು ಕಣ್ಣಾರೆ ಕಂಡಿದ್ದೇನೆ.
ಹಾಗಾಗಿ, ಯಾವುದೇ ತಪ್ಪು ನಿರ್ಧಾರ ಮಾಡಬೇಡಿ. ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುವಂತಹ ಪ್ರಯತ್ನವನ್ನು ಮಾಡಬೇಡಿ. ನಾವೆಲ್ಲರೂ ಬುದ್ಧ, ಬಸವ, ಅಂಬೇಡ್ಕರ್ ರವರ ಹಾದಿಯಲ್ಲೇ ಸಮಾಜ ಮುಖ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ನಮ್ಮ ನಾಯಕರಾದ ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಸಂವಿಧಾನ ಉಳಿಸುವ ಪ್ರಯತ್ನಕ್ಕೆ ಬಲ ತರಬೇಕಿದೆ. ಹಾಗೂ ನಮ್ಮ ಗೌರವಾನ್ವಿತ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಕೈ ಬಲಪಡಿಸುವ ಕಡೆಗೆ ನಮ್ಮ ಚಿಂತನೆ ಇರಲಿ ಎಂದು ನಿಮ್ಮನ್ನು ಕೋರುತ್ತೇನೆ.
– ಕೆ ಎನ್ ರಾಜಣ್ಣ, ಮಾಜಿ ಸಚಿವ




