ದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ, ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಪುನರಾಯ್ಕೆಯಾದರೆ ದೇಶದಲ್ಲಿ ಮತ್ತೆ ಎಂದಿಗೂ ಚುನಾವಣೆಯೇ ನಡೆಯುವುದಿಲ್ಲ ಎಂದು ಅರ್ಥಶಾಸ್ತ್ರಜ್ಞ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪತಿ ಡಾ. ಪರಕಾಲ ಪ್ರಭಾಕರ್ ಅಚ್ಚರಿಯ ಭವಿಷ್ಯ ನುಡಿದಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಕಾಂಗ್ರೆಸ್ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ, ಪ್ರಧಾನಿ ನರೇಂದ್ರ ಮೋದಿಯವರೇ ಕೆಂಪು ಕೋಟೆಯಿಂದ ದ್ವೇಷದ ಭಾಷಣ ಮಾಡುತ್ತಾರೆ. ಇಡೀ ದೇಶದಲ್ಲಿ ಲಡಾಖ್-ಮಣಿಪುರದಂತಹ ಪರಿಸ್ಥಿತಿ ಉದ್ಭವಿಸುವಂತೆ ಮಾಡುತ್ತಾರೆ ಎಂದು ಪ್ರಭಾಕರ್ ಅಭಿಪ್ರಾಯಪಟ್ಟಿದ್ದಾರೆ.
ಮೋದಿ ಮತ್ತು ಅವರ ಸಂಪುಟಮತ್ತೆ ಅಧಿಕಾರಕ್ಕೆ ಬಂದರೆ ದೇಶದ ಸಂವಿಧಾನ ಮತ್ತು ನಕ್ಷೆಯೇ ಬದಲಾಗುತ್ತದೆ. ಮತ್ತೆ ನೀವು ಹಿಂದಿನ ಭಾರತವನ್ನು ಗುರುತಿಸಲು ಕೂಡಾ ಸಾಧ್ಯವಾಗುವುದಿಲ್ಲ. ಪ್ರಧಾನಿ ಮೋದಿ ಸ್ವತಃ ಕೆಂಪುಕೋಟೆಯಿಂದಲೇ ದ್ವೇಷದ ಭಾಷಣಗಳನ್ನು ಮಾಡುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಂದು ವೇಳೆ ಪ್ರಧಾನಿಯಾಗಿ ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಜನಾಂಗೀಯ ಘರ್ಷಣೆಗೆ ತುತ್ತಾಗಿರುವ ಮಣಿಪುರದಂತಹ ಸ್ಥಿತಿ ಇಡೀ ದೇಶದಲ್ಲೂ ಆವರಿಸಲಿದೆ ಎಂದು ದೇಶದ ಜನತೆಯನ್ನು ಎಚ್ಚರಿಸಿದ್ದಾರೆ.




