ಜಗದೀಶ್ ಶೆಟ್ಟರ್ ಪಕ್ಷ ಬಿಡುವ ಕುರಿತು ಸತೀಶ್ ಜಾರಕಿಹೊಳಿ ಹೇಳಿದ್ದೇನು?

2 years ago

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ತಮಗೆ ಬಿಜೆಪಿಯಲ್ಲಿ ಸೂಕ್ತ ಗೌರವ ಮತ್ತು ಸ್ಥಾನಮಾನ ಸಿಗಲಿಲ್ಲ ಎಂದು ಬೇಸರಗೊಂಡು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಇವರಿಗೆ ಇಲ್ಲಿ ಸ್ಥಾನಮಾನದ ಜೊತೆಗೆ ಗೌರವವನ್ನು ನೀಡಲಾಗುತ್ತಿದೆ. ಹೀಗಾಗಿ ಅವರು ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು ಎಂಟು ತಿಂಗಳು ಪೂರ್ಣಗೊಂಡಿದೆ. ಹೀಗಾಗಿ ನಿಗಮ ಮಂಡಳಿಗಳನ್ನು ನೇಮಕ ಮಾಡುವ ಮೂಲಕ ಕಾರ್ಯಕರ್ತರಿಗೆ ಅಧಿಕಾರ ಕೊಡಬೇಕು. ಈ ವಿಷಯದಲ್ಲಿ ವಿಳಂಬ ಮಾಡುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಮ್ಮ ಜಿಲ್ಲೆಯಲ್ಲಿ ಯಾರು ಪಕ್ಷದ ನಿಷ್ಠಾವಂತ ಕಾರ್ಯಕರ್ತರು, ಪಕ್ಷ ಸಂಘಟನೆಗೆ ಯಾರ ಕೊಡುಗೆ ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇದೆ. ಅದನ್ನು ಆಧರಿಸಿ ಅಂತಹವರಿಗೆ ಅಧಿಕಾರ ನೀಡುವಂತೆ ಪಟ್ಟಿಯನ್ನು ಮುಖ್ಯಮಂತ್ರಿಗಳಿಗೆ ಕೊಟ್ಟಿದ್ದೇವೆ. ಆದರೆ ಅದರಲ್ಲಿ ಕೆಲವು ಹೆಸರುಗಳನ್ನು ಕೈ ಬಿಡಲಾಗಿದೆ ಎಂಬ ಮಾಹಿತಿ ಇದೆ. ಅದನ್ನು ಸರಿಪಡಿಸುವಂತೆ ಹೇಳಿದ್ದೇವೆ. ಆದಷ್ಟು ಶೀಘ್ರ ಎಲ್ಲವೂ ಬಗೆಹರಿಯಲಿದೆ ಎಂದರು.

Leave a Reply