ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹುದ್ದೆ ರೇಸ್ ನಲ್ಲಿ ನಾನಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತಾಡಿದ ಅವುರ, ಮುಂದಿನ 4 ವರ್ಷಗಳ ಕಾಲ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಲು ರಾಜ್ಯ ಸುತ್ತಿದ ಅನುಭವಸ್ಥರಿಗೆ ರಾಜ್ಯ ಕಾಂಗ್ರೆಸ್ ಸಾರಥ್ಯ ಸಿಗಲಿ ಎಂದರು.
ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಲಿದೆ ಎಂಬ ಮಾತು ಕೇಳಿಬರುತ್ತಿದೆಯಲ್ಲಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸತೀಶ್ ಜಾರಕಿಹೊಳಿ, ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಅಧ್ಯಕ್ಷ ಸ್ಥಾನದ ಬದಲಾವಣೆ ಆಗಬೇಕೆಂದರೆ ಮೊದಲು ಆ ಸ್ಥಾನ ಖಾಲಿ ಆಗಬೇಕಲ್ವಾ? ಬದಲಾವಣೆ ಬದಲು ಅಧಿಕಾರ ವಿಸ್ತರಣೆಯೂ ಆಗಬಹುದಲ್ವಾ ಎಂದು ಮಾಧ್ಯದಮವರನ್ನೇ ಮರು ಪ್ರಶ್ನಿಸಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಈಗಾಗಲೇ ಪ್ರಬಲ ಸಮುದಾಯಗಳ ನಾಯಕರು ಕಣ್ಣಿಟ್ಟಿದ್ದಾರೆ. ಆದರೆ ಸತೀಶ್ ಜಾರಕಿಹೊಳಿಯವರ ಸಂಘಟನಾ ಸಾಮರ್ಥ್ಯದ ಮೇಲೆ ಕೇಂದ್ರ ನಾಯಕತ್ವಕ್ಕೆ ನಂಬಿಕೆ ಇದೆ. ಕರ್ನಾಟಕದಾದ್ಯಂತ ಬುದ್ಧ, ಬಸವ, ಅಂಬೇಡ್ಕರ್ ವಿಚಾರಗಳೊಂದಿಗೆ, ವೈಚಾರಿಕತೆಯನ್ನು ಬಿತ್ತುತ್ತಲೆ ಪ್ರಸಾರ ಮಾಡುತ್ತಿರುವ ಸತೀಶ್ ಜಾರಕಿಹೊಳಿಯವರು ಜಾತ್ಯತೀತ ನಾಯಕರಾಗಿ ಬೆಳೆದಿದ್ದಾರೆ. ಅವರ ಸಂಘಟನಾ ಕೌಶಲ್ಯವನ್ನು ಕೇಂದ್ರ ನಾಯಕತ್ವ ಈಗಾಗಲೇ ಗಮನಿಸಿದ್ದು, ಅವರಿಗೆ ಈ ಬಾರಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ಇದೆ.
ಇನ್ನು ಬಿಜೆಪಿಯಲ್ಲಿ ಲಿಂಗಾಯತ ಮತ್ತು ಜೆಡಿಎಸ್ ನಲ್ಲಿ ಒಕ್ಕಲಿಗ ಸಮುದಾಯದವರು ರಾಜ್ಯಾಧ್ಯಕ್ಷ ಸ್ಥಾನದಲ್ಲಿದ್ದು, ಅಹಿಂದ ಮತಗಳ ಕ್ರೋಡೀಕರಣ ಮತ್ತು ಸತೀಶ್ ಜಾರಕಿಹೊಳಿಯವರ ಸಂಘಟನಾ ಚಾತುರ್ಯದ ಆಧಾರದಲ್ಲಿ ಈ ಬಾರಿ ಅವರಿಗೆ ಹೈಕಮಾಂಡ್ ಹೊಣೆ ನೀಡುವ ಸಾಧ್ಯತೆ ದಟ್ಟವಾಗಿದೆ.




