ಬೆಂಗಳೂರು: ಚುನಾವಣೆಯಲ್ಲಿ ನಾವು ಯಾವುದೇ ಅಕ್ರಮ ಎಸಗಿಲ್ಲ ಎಂದು ಹೇಳುತ್ತಿರುವ ಬಿಜೆಪಿ ನಾಯಕರು ಇವಿಎಂ ಬದಲಾಗಿ ಪೇಪರ್ ಮೂಲಕ ಚುನಾವಣೆ ಎದುರಿಸಲು ಇರುವ ಭಯವಾದರೂ ಏನು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕರ್ನಾಟಕ ಸರ್ಕಾರದ ತೀರ್ಮಾನ. ಇದರಿಂದ ಬಿಜೆಪಿಗೆ ಆತಂಕವೇಕೆ? ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಅವಕಾಶವಿದೆ. ಬಿಜೆಪಿ ಅವಧಿಯಲ್ಲಿ ಮಾಡಿರುವ ಕಾನೂನು ಇದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಲು ನಾವು ತೀರ್ಮಾನಿಸಿದ್ದೇವೆ ಎಂದರು.
ಈ ತೀರ್ಮಾನದಿಂದ ಬಿಜೆಪಿಯವರಿಗೆ ಗಾಬರಿ ಯಾಕೆ? ಕಳ್ಳನ ಮನಸ್ಸು ಹುಳ್ಳಗೆ ಎಂಬಂತೆ ಯಾಕೆ ವರ್ತಿಸುತ್ತಿದ್ದಾರೆ. ನಾವು ಲೋಕಸಭೆ ಚುನಾವಣೆಗಳನ್ನು ಪರಿಶೀಲನೆ ಮಾಡಿದ್ದೇವೆ. ಸಹಕಾರಿ ಸಂಘಗಳಿಗೆ ಚುನಾವಣೆ ನಡೆಸುವಂತೆ ಸ್ಥಳೀಯ ಸಂಸ್ಥೆ ಚುನಾವಣೆ ಮಾಡುತ್ತಿದ್ದೇವೆ. ಕೇಂದ್ರ ಚುನಾವಣಾ ಆಯೋಗ ಅವರ ತೀರ್ಮಾನದಂತೆ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳ ಚುನಾವಣೆ ನಡೆಸಲಿದೆ ಎಂದರು.


