ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ತಮ್ಮ ಸರ್ಕಾರ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ, ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಘೋಷಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಿದಕ್ಕಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ನೀಡಿದ ‘ನಮ್ಮಭಿಮಾನದ ಅಭಿನಂದನಾ ಸಮಾರಂಭ’ದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಈ ಕುರಿತು ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ ನೇತೃತ್ವದಲ್ಲಿ ರಚಿಸಿರುವ ಸಮಿತಿ ವರದಿ ನೀಡಿದ ತಕ್ಷಣ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಈ ಸಮಿತಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದು ಮಾಡಿರುವ ವಿವಿಧ ರಾಜ್ಯಗಳಿಗೆ ಸಮಿತಿ ಭೇಟಿ ನೀಡಿ, ಅಧ್ಯಯನ ನಡೆಸಲಿದೆ. ಶೀಘ್ರದಲ್ಲೇ ವರದಿ ನೀಡಲು ಸೂಚಿಸಲಾಗಿದೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತಂದು ಬಡ್ತಿ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ನೌಕರರು ಹಾಗೂ ಅವರ ಅವಲಂಬಿತ ಕುಟುಂಬಗಳ ಸದಸ್ಯರಿಗೆ ನಗದು ರಹಿತ ಆರೋಗ್ಯ ಚಿಕಿತ್ಸೆ ‘ಕರ್ನಾಟಕ ಆರೋಗ್ಯ ಸಂಜೀವಿನ ಯೋಜನೆ’ ಜಾರಿಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ. ಸಮರ್ಪಕ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಆರು ಮತ್ತು ಏಳನೇ ಆಯೋಗದ ಎರಡೂ ಶಿಫಾರಸುಗಳನ್ನು ನಾನು ಮುಖ್ಯಮಂತ್ರಿ ಇದ್ದಾಗಲೇ ಜಾರಿ ಮಾಡಿರುವೆ. 2018ರಲ್ಲಿ 10,500 ಕೋಟಿ ಹಾಗೂ 2024ರಲ್ಲಿ 20 ಸಾವಿರ ಕೋಟಿ ಸರ್ಕಾರಕ್ಕೆ ಹೆಚ್ಚುವರಿ ಹೊರೆಯಾಗಿದೆ. ಜನರ ತೆರಿಗೆ ಹಣವನ್ನು ಖರ್ಚು ಮಾಡುವಾಗ ಸರ್ಕಾರ ಸದಾ ಮಿತವ್ಯಯದ ಬಗ್ಗೆ ಚಿಂತಿಸುತ್ತದೆ. ಆದರೂ, ಸರ್ಕಾರಿ ನೌಕರರಿಗೆ ಸವಲತ್ತು ನೀಡುವಾಗ ಆಯೋಗದ ಶಿಫಾರಸಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗಿದೆ ಎಂದರು.




