ಬೆಂಗಳೂರು: ತೈಲ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ಮಾಡಲು ಯಾವ ನೈತಿಕತೆ ಇದೆ. ಅವರಿಗೆ ನಾಚಿಕೆಯಾಗಬೇಕು ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ವಾಗ್ದಾಳಿ ನಡೆಸಿದರು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಬಿಜೆಪಿ ನಾಯಕರ ಪ್ರತಿಭಟನೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಚಲುವರಾಯಸ್ವಾಮಿ, ಪೆಟ್ರೋಲ್ ಬೆಲೆ 70 ರೂ. ಇದ್ದದ್ದನ್ನು ಹೆಚ್ಚಳ ಮಾಡಿದರು. ಅಡುಗೆ ಅನಿಲ ಬೆಲೆ 1,200 ರೂ. ಗೆ ಹೆಚ್ಚಿಸಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತೈಲ ಬೆಲೆ ಎಷ್ಟಿದೆ ಎಂಬುದನ್ನು ಸಾರ್ವಜನಿಕರು ಗಮನಿಸಬೇಕು ಎಂದರು.
ಆಡಳಿತ ನಡೆಸುವವರು ತೆರಿಗೆ ಸಂಗ್ರಹ ಮಾಡಬೇಕಲ್ಲವೇ? ಬೆಲೆ ಇಳಿಸಲು ಬಿಜೆಪಿಯ 17 ಸಂಸದರು ಕೇಂದ್ರದ ಮುಂದೆ ಪ್ರತಿಭಟನೆ ಮಾಡಲಿ ಎಂದು ಸವಾಲೆಸೆದರು.
ತೆರಿಗೆ ಸಂಗ್ರಹ ಮಾಡುವುದು ಸಹಜ. ಆದರೆ ಅದು ಸಾರ್ವಜನಿಕರಿಗೆ ಹೊರೆಯಾಗಬಾರದು. ನಮ್ಮ ರಾಜ್ಯದ ತೈಲ ಬೆಲೆ ಬೇರೆ ರಾಜ್ಯಗಳಿಗಿಂತ ಕಡಿಮೆ ಇದೆ ಎಂದರು.




