ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಏನು ಮಾಡುತ್ತಿದ್ದರು?: ಡಾ.ಜಿ.ಪರಮೇಶ್ವರ್

2 years ago

#BJP #NationalGeneralSecretary #GParameshwar

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿದ್ದ ಅವಧಿಯಲ್ಲಿ ಆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬೆಂಗಳೂರಿನಲ್ಲೇ ಇರುತ್ತಿದ್ದರು. ಆಗ ಅವರು ಏನು ಮಾಡುತ್ತಿದ್ದರು ಎಂದು ಗೃಹ ಸಚಿವ ಡಾ. ಪರಮೇಶ್ವರ್ ಪ್ರಶ್ನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬೆಂಗಳೂರಿಗೆ ಬರುವುದು ಹಣ ವಸೂಲಿಗೆ ಎನ್ನುವುದಾದರೆ, ಹಿಂದೆ ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಅವರ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಇಲ್ಲಿಯೇ ಇರುತ್ತಿದ್ದರಲ್ಲ, ಅದಕ್ಕೆ ಏನು ಹೇಳಬೇಕು ಎಂದು ಪ್ರಶ್ನಿಸಿದರು.

ಮೊದಲ ಸಲ ಗೆದ್ದವರಿಗೆ ನಿಗಮ ಮಂಡಳಿ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪಕ್ಷದ ಅಧ್ಯಕ್ಷರಾಗಿ ಅವರ ಅಭಿಪ್ರಾಯ ಹೇಳಿದ್ದಾರೆ ಮತ್ತು ಅದೇ ಅಂತಿಮವಾಗಿರುತ್ತದೆ. ಹೊಸಬರಿಗೆ ಯಾಕೆ ನಿಗಮ ಮಂಡಳಿಯಲ್ಲಿ ಅವಕಾಶ ಕೊಡುತ್ತಿಲ್ಲ ಎಂಬ ಬಗ್ಗೆಯೂ ಡಿ.ಕೆ.ಶಿವಕುಮಾರ್ ಅವರೇ ಹೇಳಬೇಕು. ಹೆಚ್ಚು ಬಾರಿ ಗೆದ್ದವರನ್ನು ನೇಮಿಸಬಹುದು. ಯಾವ ಪದ್ಧತಿ,ಮಾನದಂಡ ಅನುಸರಿಸ್ತಿದ್ದಾರೆ ಗೊತ್ತಿಲ್ಲ ಎಂದರು.

ಗುತ್ತಿಗೆದಾರರ ಬಾಕಿ ಬಿಲ್ ಬಗ್ಗೆ ಹೈಕೋರ್ಟ್ ಆಕ್ಷೇಪ ವ್ಯಕ್ತ ಪಡಿಸಿರುವ ಬಗ್ಗೆ ಹಣಕಾಸು ಸಚಿವರೂ ಆಗಿರುವ ಸಿಎಂ, ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸುತ್ತಾರೆ. ಬಾಕಿ ಬಿಲ್ ಪಾವತಿ ಬಗ್ಗೆ ಏನೋ ಪದ್ಧತಿ ಇದೆ, ಯಾರಿಗೆ ಕೊಡಬೇಕು ಎನ್ನುವ ಬಗ್ಗೆ ಮಾರ್ಗಸೂಚಿಗಳಿವೆ. ಅದನ್ನು ಪಾಲನೆ ಮಾಡುತ್ತಾರೆ ಎಂದರು.

Leave a Reply