ಬೆಂಗಳೂರು: ಅತ್ಯಾಚಾರ ಅಪಹರಣ ಹಾಗೂ ಲೈಂಗಿಕ ಕಿರುಕುಳ ಆರೋಪದಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಎಚ್ ಡಿ ರೇವಣ್ಣ ಅವರನ್ನು ಬಂಧಿಸುವ ಮೂಲಕ ತನಿಕೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ತನಿಕಾ ತಂಡಕ್ಕೆ ಸೂಚನೆ ನೀಡಿದ್ದಾರೆ.
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
- ಕಾಮಗಾರಿ ಬಿಲ್ ಪಾವತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ : ಕೃಷ್ಣ ಬೈರೇಗೌಡ
ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಚಿಸಲಾಗಿರುವ ಎಸ್‌ಐಟಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಂಪೂರ್ಣ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಅನುಮಾನಕ್ಕೆ ಅವಕಾಶವಿಲ್ಲದಂತೆ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪ್ರಕರಣದ ಸಂಬಂಧಪಟ್ಟಂತೆ ಇದುವರೆಗಿನ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿಯವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದು, ಲುಕ್‌ಔಟ್ ನೋಟಿಸ್ ಜೊತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.
ಇದನ್ನು ಆಲಿಸಿದ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಇದೊಂದು ಅತ್ಯಂತ ಕೆಟ್ಟ ಪ್ರಕರಣವಾಗಿದೆ.ಇದರಿಂದ ರಾಜ್ಯದ ಪ್ರತಿಷ್ಠೆ ಗೆ ಧಕ್ಕೆ ಬಂದಂತಾಗಿದ್ದು, ಪೊಲೀಸರು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವ ಮೂಲಕ ಘನತೆಯನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕು ಎಂದು ಹೇಳಿದರು.
ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೂಡಲೇ ಕ್ರಮ ಕೈಗೊಳ್ಳುವ ಜೊತೆಗೆ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆ ಸಹಿಸಲಾಗದು ಎಂದು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಈ ವೇಳೆ ಸಂಪೂರ್ಣ ಮಾಹಿತಿ ನೀಡಿದ ಅಧಿಕಾರಿಗಳು ಸೂಕ್ತ ಕ್ರಮಗಳೊಂದಿಗೆ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗುವುದು. ಸಿಬಿಐ ಸಹಕಾರದೊಂದಿಗೆ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಹೊರಡಿಸುವ ಕುರಿತು ಚರ್ಚೆ ನಡೆದಿದೆ. ಇದರಿಂದ ತನಿಖೆಗೆ ವೇಗ ಸಿಗಲಿದೆ. ವಿಮಾನ ನಿಲ್ದಾಣಗಳಿಂದ ಮಾಹಿತಿ ಸಿಕ್ಕ ಕೂಡಲೇ ಬಂಧಿಸಿ ಕರೆ ತರುವುದಾಗಿ ವಿವರಿಸಿದರು.




