ವಿಧಾನ ಪರಿಷತ್ ಸದಸ್ಯ ಕೆ. ಗೋವಿಂದರಾಜು ಬಂಧನ ಯಾವಾಗ? ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಮಾಜಿ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಅವರನ್ನು ಮೊದಲು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಜೆಡಿಎಸ್ ಪಕ್ಷವು ಆಗ್ರಹಿಸುತ್ತದೆ.
- ಎಲ್ಇಡಿ ಬೀದಿ ದೀಪ ಯೋಜನೆ ಅನುಷ್ಠಾನಗೊಂಡರೆ ಶೇ.61.01 ರಷ್ಟು ವಿದ್ಯುತ್ ಉಳಿತಾಯ: ಕೃಷ್ಣ ಬೈರೇಗೌಡ
- ಋಗ್ವೇದದ ಮಹತ್ವ ಮತ್ತು ಅಪೌರುಷೇಯ ತತ್ವದ ವಿಶ್ಲೇಷಣೆ
- ಸುರೇಶ್ ಕುಮಾರ್ ರಿಂದ ಕಾಂಗ್ರೆಸ್ ವಿರುದ್ದ ‘ಸಂವಿಧಾನಿಕ’ ಪೊಳ್ಳು ವಾದ !
- ಬುದ್ಧಿಜೀವಿ ನಟ ಎಂದು ಕರೆಯಲ್ಪಡುವ ಅನಂತನಾಗ್ ಅವರೊಂದಿಗಿನ ಒಂದು ಪ್ರಸಂಗ
- ಆರ್ಎಸ್ಎಸ್ ಮುಖ್ಯಸ್ಥರ ಪ್ರಕಾರ ಹಿಂದೂಗಳ ವಿಧಗಳು
#RCB ಐಪಿಎಲ್ ಗೆಲುವಿಗಾಗಿ ವಿಧಾನಸೌಧದ ಬಳಿ ಆಟಗಾರರಿಗೆ ಸನ್ಮಾನ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾರಂಭಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಆದರೆ ಮುಖ್ಯಮಂತ್ರಿಗಳ ಮಾಜಿ ರಾಜಕೀಯ ಕಾರ್ಯದರ್ಶಿ ಕೆ ಗೋವಿಂದರಾಜ್ ಪೊಲೀಸರ ಮೇಲೆ ಒತ್ತಡ ಹೇರಿ 2 ಕಡೆ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಮಾಡಿದ್ದರು.
ಕಾಲ್ತುಳಿತ ಘಟನೆಯಲ್ಲಿ 11 ಅಮಾಯಕರು ಮೃತರಾದ ಬಳಿಕ ಸಿಎಂ Siddaramaiah ಅವರು, ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ವಜಾಗೊಳಿಸಿ “ಕೈ” ತೊಳೆದುಕೊಂಡಿದ್ದಾರೆ. ಆದರೆ, ದುರಂತಕ್ಕೆ ಪ್ರಮುಖ ಕಾರಣ ಹಾಗೂ ಸೂತ್ರಧಾರ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಅವರನ್ನು ಬಂಧಿಸಬೇಕು ಮತ್ತು ಅವರ ಪಾತ್ರದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಹ ಸಲ್ಲಿಸಲಾಗಿದೆ.
– ಜೆಡಿಎಸ್




