ಮೈಸೂರು: ನಿನ್ನೆ ಮೈಸೂರಿನಲ್ಲಿ ಸರ್ಕಾರದ ವತಿಯಿಂದ ಸಮಾವೇಶ ಆಯೋಜಿಸಲಾಗಿತ್ತು. ಇಂತಹ ಸಂದರ್ಭಗಳಲ್ಲಿ ಕಾರ್ಯಕ್ರಮದಲ್ಲಿ ಹಾಜರಿರುವವರಿಗೆ ಸ್ವಾಗತ ಕೋರುವುದು ಪರಿಪಾಠ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಎಲ್ಇಡಿ ಬೀದಿ ದೀಪ ಯೋಜನೆ ಅನುಷ್ಠಾನಗೊಂಡರೆ ಶೇ.61.01 ರಷ್ಟು ವಿದ್ಯುತ್ ಉಳಿತಾಯ: ಕೃಷ್ಣ ಬೈರೇಗೌಡ
- ಋಗ್ವೇದದ ಮಹತ್ವ ಮತ್ತು ಅಪೌರುಷೇಯ ತತ್ವದ ವಿಶ್ಲೇಷಣೆ
- ಸುರೇಶ್ ಕುಮಾರ್ ರಿಂದ ಕಾಂಗ್ರೆಸ್ ವಿರುದ್ದ ‘ಸಂವಿಧಾನಿಕ’ ಪೊಳ್ಳು ವಾದ !
- ಬುದ್ಧಿಜೀವಿ ನಟ ಎಂದು ಕರೆಯಲ್ಪಡುವ ಅನಂತನಾಗ್ ಅವರೊಂದಿಗಿನ ಒಂದು ಪ್ರಸಂಗ
- ಆರ್ಎಸ್ಎಸ್ ಮುಖ್ಯಸ್ಥರ ಪ್ರಕಾರ ಹಿಂದೂಗಳ ವಿಧಗಳು
ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕಾರ್ಯಕ್ರಮದಲ್ಲಿ ಆ ವೇಳೆಯಲ್ಲಿ ಇರದಿದ್ದ ಕಾರಣ, ಅವರ ಹೆಸರನ್ನು ನಾನು ಸಹಜವಾಗಿ ತೆಗೆದುಕೊಳ್ಳಲಿಲ್ಲ. ಇದರಲ್ಲಿ ಅವಮಾನ ಮಾಡುವ ಪ್ರಶ್ನೆ ಎಲ್ಲಿದೆ? ಎಂದು ಕೇಳಿದರು.
ಬಿಜೆಪಿಯವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ನನ್ನ ಹಾಗೂ ಡಿ ಕೆ ಶಿವಕುಮಾರ್ ನಡುವೆ ಒಡಕುಂಟು ಮಾಡುವ ಉದ್ದೇಶದಿಂದ ಇಂತಹ ಹೇಳಿಕೆಗಳನ್ನು ಅವರು ನೀಡುತ್ತಾರೆ. ಇದರಿಂದ ರಾಜಕೀಯ ಲಾಭವಾಗಬಹುದೆಂಬ ಭ್ರಮೆ ಬಿಜೆಪಿಯವರಿಗಿದ್ದು, ಅದು ಸದಾ ಭ್ರಮೆಯಾಗಿಯೇ ಇರಲಿದೆ ಎಂದರು.
ನಮ್ಮ ಸರ್ಕಾರಕ್ಕೆ ಎರಡು ವರ್ಷ ತುಂಬಿದ ಸಂದರ್ಭದಲ್ಲಿ ವಿಜಯನಗರದಲ್ಲಿ ನಡೆದ ಸಮಾವೇಶದಲ್ಲಿ ಸುಮಾರು 2 ಲಕ್ಷ ಜನ ಭಾಗವಹಿಸಿದ್ದರು. ಇದು ಸರ್ಕಾರಕ್ಕೆ ಜನರ ಬೆಂಬಲವನ್ನು ಸೂಚಿಸುತ್ತದೆ. ಬಿಜೆಪಿಯವರು ಗ್ಯಾರಂಟಿ ವಿರೋಧಿಸುವ ಮಾತುಗಳನ್ನಾಡುತ್ತಲೇ, ನಮ್ಮ ಗ್ಯಾರಂಟಿ ಯೋಜನೆಗಳನ್ನೇ ಅನುಕರಿಸುತ್ತಿದ್ದಾರೆ. ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ಧರಿದ್ದೇವೆ ಎಂದರು.
ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ಡಿಜಿಟಲ್ ಪೇಮೆಂಟ್ ನಿಂದ ತೆರಿಗೆ ನೋಟೀಸ್ ನೀಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಜಿಎಸ್‌ಟಿ ಪದ್ಧತಿ ಕೇಂದ್ರ ಸರ್ಕಾರ ಮಾಡಿದ್ದು, ಜಿಎಸ್‌ಟಿ ಕೌನ್ಸಿಲ್ ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತದೆ. ಇದಕ್ಕೆ ರಾಜ್ಯ ಸರ್ಕಾರಗಳ ಜವಾಬ್ದಾರಿಯಿಲ್ಲ. ಆದಾಗ್ಯೂ ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ, ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯೊಂದಿಗೆ ಚರ್ಚಿಸಿ, ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.




