ಬೆಂಗಳೂರು: ರಾಜ್ಯದ ಬರ ಪೀಡಿತ ಪ್ರದೇಶಗಳಲ್ಲಿ ಅಗತ್ಯ ಪರಿಹಾರಕ್ಕೆ ಆರ್ಥಿಕ ನೆರವು ಮತ್ತು ರಾಜ್ಯಕ್ಕೆ ಅನುದಾನ ನೀಡುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಜಟಾಪಟಿ ತೀವ್ರವಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕರ್ನಾಟಕಕ್ಕೆ ಬರ ಪರಿಹಾರ ಅನುದಾನ ಬಿಡುಗಡೆ ವಿಳಂಬವಾಗಲು ಕೇಂದ್ರ ಸರ್ಕಾರ ಕಾರಣವಲ್ಲ ಎಂಬ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಸುಳ್ಳುಗಳ ಮೇಲೆಯೇ ರಾಜಕಾರಣ ನಡೆಸುತ್ತಾ ಬಂದಿರುವ ಬಿಜೆಪಿಗೆ ಸತ್ಯ ಹೇಳಿ ಅಭ್ಯಾಸ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ಏಪ್ರಿಲ್ 2ರಂದು ಕರ್ನಾಟಕಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಒಂದಷ್ಟು ಸುಳ್ಳುಗಳನ್ನು ಹೇಳಿ ಹೋಗಿದ್ದರು. ಈಗ ನಿರ್ಮಲಾ ಅವರು ಬಂದು ಹಳೆಯ ಸುಳ್ಳುಗಳನ್ನು ಪುನರಾವರ್ತಿಸಿದ್ದಾರೆ. ಆದರೆ, ಕರ್ನಾಟಕ ಜನತೆಗೆ ಸತ್ಯ ತಿಳಿದಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯಗಳು ಮನದಟ್ಟಾಗಿದೆ’ ಎಂದು ಕಿಡಿಕಾರಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರೇ ರಾಜ್ಯಕ್ಕೆ ಮತ್ತೆ ಮತ್ತೆ ಬಂದು ಸುಳ್ಳು ಹೇಳುವ ಶ್ರಮ ತೆಗೆದುಕೊಳ್ಳಬೇಡಿ. ಒಂದೇ ಒಂದು ಬಾರಿ ಮುಖಾಮುಖಿ ಚರ್ಚೆಗೆ ಬನ್ನಿ. ರಾಜ್ಯದ ಜನತೆಯ ಸಮಕ್ಷಮದಲ್ಲಿ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳುವ ಕೆಲಸ ಮಾಡಿ. ಯಾರದ್ದು ಸತ್ಯ, ಯಾರದ್ದು ಸುಳ್ಳು ಎನ್ನುವುದನ್ನು ಜನರೇ ತೀರ್ಮಾನಿಸಲಿ ಎಂದು ಸವಾಲೊಡ್ಡಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರಕ್ಕೆ ₹697 ಕೋಟಿ ನೀಡಿದೆ ಎಂದು ನಿರ್ಮಲಾ ಅವರು ಹೇಳಿದ್ದಾರೆ. ಆದರೆ, ಇದನ್ನು ಹೇಳುವಾಗ ನಿಜವಾದ ಸತ್ಯವನ್ನು ಅವರು ಮುಚ್ಚಿಟ್ಟಿದ್ದಾರೆ. ಪ್ರಕೃತಿ ವಿಕೋಪದ ಪರಿಹಾರ ನೀಡಲು ಕೇಂದ್ರ ಸರ್ಕಾರದ ಅಡಿಯಲ್ಲಿ ಎರಡು ನಿಧಿಗಳಿವೆ. ಮೊದಲನೆಯದು ಎಸ್ಡಿಆರ್ಎಫ್ ಹಾಗೂ ಎರಡನೆಯದು ಎನ್ಡಿಆರ್ಎಫ್ ಎಂದಿದ್ದಾರೆ.
ಸಾಮಾನ್ಯ ಸ್ವರೂಪದ ಪ್ರಕೃತಿ ವಿಕೋಪಕ್ಕೆ ಎಸ್ಡಿಆರ್ಎಫ್ನಿಂದ ಪರಿಹಾರ ನೀಡಲಾಗುವುದು. ಈ ನಿಧಿಯಡಿಯಲ್ಲಿ ನೀಡುವ ಪರಿಹಾರದಲ್ಲಿ ಶೇ.75ರಷ್ಟು ಪಾಲನ್ನು ಕೇಂದ್ರ ನೀಡಿದರೆ ಉಳಿದ ಶೇ.25ರಷ್ಟು ಪಾಲನ್ನು ರಾಜ್ಯ ಸರ್ಕಾರ ನೀಡುತ್ತದೆ. ಇದರಡಿಯಲ್ಲಿ ನೀಡುವ ಪರಿಹಾರದ ಮೊತ್ತವನ್ನು ಕೇಂದ್ರ ಹಣಕಾಸು ಆಯೋಗ ನಿರ್ಧಾರ ಮಾಡುತ್ತದೆ ಎಂದು ವಿವರ ನೀಡಿದ್ದಾರೆ.
ಬರಗಾಲದಿಂದಾಗಿ ರಾಜ್ಯ ಬಹಳ ನಷ್ಟವನ್ನು ಅನುಭವಿಸುತ್ತಿದೆ. ರಾಜ್ಯದ 236 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳು ಬರಗಾಲಕ್ಕೀಡಾಗಿವೆ. ರಾಜ್ಯದ 48 ಲಕ್ಷ ಹೆಕ್ಟೇರ್ ಪ್ರದೇಶದ 34 ಲಕ್ಷ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ನಮ್ಮ ರೈತರಿಗೆ 37 ಸಾವಿರ ಕೋಟಿಗೂ ಹೆಚ್ಚಿನ ನಷ್ಟ ಉಂಟಾಗಿದೆ. ಆದರೆ, ನಾವು ಕೇವಲ 18 ಸಾವಿರ ಕೋಟಿ ಪರಿಹಾರವನ್ನು ಮಾತ್ರ ಕೇಂದ್ರ ಸರ್ಕಾರದಿಂದ ಕೇಳುತ್ತಿದ್ದೇವೆ. ಈ ಪರಿಹಾರವನ್ನು ಎನ್ಡಿಆರ್ಎಫ್ನಿಂದಲೇ ಕೊಡಬೇಕಾಗುತ್ತದೆ. ಈ ಸತ್ಯವನ್ನು ನಿರ್ಮಲಾ ಅವರು ಮರೆಮಾಚುತ್ತಿದ್ದಾರೆ ಎಂದಿದ್ದಾರೆ.




