ಬೆಂಗಳೂರು: ತಾನು ಹೇಳಿದಂತೆ ಕೇಳಲಿಲ್ಲ ಎಂದು ಅಣ್ಣನ ಮೇಲೆ ಕೋಪಗೊಂಡು ಆತನ ಇಡೀ ಕುಟುಂಬ ಮುಗಿಸಲು ಹೊಂಚುಹಾಕಿ ಮಧ್ಯರಾತ್ರಿಯಲ್ಲಿ ಆತನ ಮನೆ ಸುಡಲು ಹೋಗಿ ಆ ಬೆಂಕಿಯಲ್ಲಿ ತಾನೇ ಸುಟ್ಟು ಸಾವು ಬದುಕಿನೊಂದಿಗೆ ಆಸ್ಪತ್ರೆಯಲ್ಲಿ ಹೋರಾಡುತ್ತಿದ್ದಾನೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಬೆಂಗಳೂರು ಹೊರವಲಯದ ಹೊಸಕೋಟೆ ತಾಲೂಕಿನ ಗೋವಿಂದಪುರ ಗ್ರಾಮದ ರಾಮಕೃಷ್ಣ ಮತ್ತು ಮುನಿರಾಜು ಅಣ್ಣ ತಮ್ಮಂದಿರು. ಇಬ್ಬರೂ ಕೃಷಿಕರು. ಇದರ ಜೊತೆಗೆ ಮುನಿರಾಜು ಚೀಟಿ ವ್ಯವಹಾರ ಮಾಡಿಕೊಂಡಿದ್ದರು.
ಕಳೆದ 8 ವರ್ಷಗಳಿಂದ ಗ್ರಾಮದಲ್ಲಿ ಪಟಾಕಿ ಚೀಟಿ ನಡೆಸಿ ಮುನಿರಾಜು ಕೈಸುಟ್ಟುಕೊಂಡಿದ್ದನು. ಚೀಟಿ ಹಾಕಿದ್ದವರು ಹಣ ವಾಪಸ್ ನೀಡುವಂತೆ ಗಲಾಟೆ ಮಾಡಿದ ಕಾರಣ ತನ್ನ ಪಾಲಿನ ಪಿತ್ರಾರ್ಜಿತ ಆಸ್ತಿಯಲ್ಲಿ ಸ್ವಲ್ಪ ಜಮೀನು ಮಾರಿ ಕುಟುಂಬಸ್ಥರು ಹಣ ನೀಡಿದ್ದ. ಆದರೆ ಆ ಹಣ ಸಾಕಾಗದ ಕಾರಣ ಉಳಿದ ಜಮೀನು ಸಹ ಮಾರಾಟ ಮಾಡಿ ಹೆಚ್ಚಿನ ನೀಡುವಂತೆ ಮುನಿರಾಜು ತನ್ನ ಅಣ್ಣನನ್ನು ಕೇಳಿದ್ದ. ಆದರೆ ಇರುವ ಅಲ್ಪ ಸ್ವಲ್ಪ ಜಮೀನು ಮಾರಲ್ಲ ಎಂದು ಅಣ್ಣ ಸ್ಪಷ್ಟವಾಗಿ ಹೇಳಿದ್ದ.
ಹೀಗಾಗಿ ಸಹೋದರ ರಾಮಕೃಷ್ಣ ಕುಟುಂಬವನ್ನೇ ಮುಗಿಸುವ ಸಂಚುಮಾಡಿದ್ದ ಮುನಿರಾಜು, ಕಳೆದ ರಾತ್ರಿ ತನ್ನ ಅಣ್ಣನ ಮನೆಯ ಬಾಗಿಲಿನ ಚಿಲಕ ಹಾಕಿ ನಂತರ ರೂಂನಿಂದ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಆದರೆ ಅಣ್ಣನ ಕುಟುಂಬವನ್ನೇ ನಿರ್ನಾಮ ಮಾಡಲು ಹೋದ ಮುನಿರಾಜುವಿಗೆ ಅಲ್ಲೇ ಶಿಕ್ಷೆಯಾಗಿದೆ. ಬೆಂಕಿ ಹಚ್ಚುವ ವೇಳೆ ಈತನ ಕೈನಲ್ಲಿ ಪೆಟ್ರೋಲ್ ಡಬ್ಬ ಇದ್ದ ಕಾರಣ ಏಕಾಏಕಿ ಹೊತ್ತಿಕೊಂಡ ಬೆಂಕಿ ಈತನನ್ನು ಆವರಿಸಿದೆ. ತನ್ನ ದೇಹಕ್ಕೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಾಪಾಡಿ ಕಾಪಾಡಿ ಎಂದು ಮುನಿರಾಜು ಕಿರುಚಾಡಿದ್ದಾನೆ.
ಕೂಡಲೇ ಅಕ್ಕಪಕ್ಕದ ಮನೆಯವರು ಸಹಾಯಕ್ಕೆ ಧಾವಿಸಿದ್ದಾರೆ. ಗಾಯಾಳುವಿಗೆ ಹೊಸಕೋಟೆ ಆಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ತಿರುಮಲಶೆಟ್ಟಿಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಮನೆಗೆ ಬೆಂಕಿ ಹಚ್ಚಲು ಹೋಗಿ ತಾನೇ ಸುಟ್ಟುಕೊಂಡ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ದೃಶ್ಯ ಭಯಾನಕವಾಗಿದೆ.



