ಶಾಸಕ Sunil Kumar Karkala ಅವರೇ, ನಾನು ಚುನಾವಣಾ ಕಲಿ ಆಗದೇ ಇದ್ದರೂ ಪರವಾಗಿಲ್ಲ, ಆದರೆ ನಿಮ್ಮಂತೆ “ಪರಶುರಾಮನ” ಕಲಿಯಂತೂ ಆಗಲಾರೆ. ಬಿಜೆಪಿಯ ಅಧ್ಯಕ್ಷ ಸ್ಥಾನಕ್ಕೆ ಅರ್ಧನಾರೀಶ್ವರನ್ನಾದರೂ ಮಾಡಲಿ ಎಂದು ಹೇಳುವ ಬದಲು “ಅರ್ಧನಾರೀಶ್ವರ ಪ್ರತಿಮೆ” ಮಾಡಲಿ ಎಂದು ಹೇಳಿಕೆ ಕೊಟ್ಟಿದ್ದರೆ ಬಹುಶಃ ನಿಮಿಗೆ ಲಾಭವಾಗುತ್ತಿತ್ತು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ನಾರಿ ಶಕ್ತಿ, ನಾರಿ ತತ್ವದ ಉಪದೇಶ ನಿಮ್ಮ ಸಂಘದ ಸರ ಸಂಘ ಸಂಚಾಲಕರಿಗೆ ಮಾಡುವಿರಂತೆ, ಇಲ್ಲಿವರೆಗೂ ಬಿಜೆಪಿ ಪಕ್ಷ ಒಬ್ಬೇ ಒಬ್ಬ ಮಹಿಳೆಯನ್ನ ಯಾಕೆ ಅಧ್ಯಕ್ಷರನ್ನಾಗಿ ಮಾಡಿಲ್ಲ ಎಂಬ ಪ್ರಶ್ನೆಗೆ ಉತ್ತರ ಇದ್ಯಾ? ಅಥವಾ “ಮಹಿಳೆ ನಾಲ್ಕು ಗೋಡೆಯಲ್ಲೇ ಬದುಕಬೇಕು” ಎಂದು ಮೋಹನ್ ಭಾಗವತ್ ಹೇಳಿಕೆಯಲ್ಲೇ ಉತ್ತರವಿದ್ಯಾ?
“ಬೇಟಿ ಬಚಾವೋ” ಎಂದು ಕೇಂದ್ರದ ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು ಅಲ್ಲವೇ? ಅಸಲಿಗೂ ನಾರಿ ಶಕ್ತಿಯಿಂದ ಬೆದರಿ ಬೆಂಡಾಗಿರುವುದು ನಿಮ್ಮದೇ ಪಕ್ಷದ ನಾಯಕರೇ ಹೊರತು ಸಾಮಾನ್ಯ ಜನರಲ್ಲ. ಅಷ್ಟಕ್ಕೂ ನಿಮ್ಮ ಪಕ್ಷದ ಘಟಾನುಘಟಿ 19 ನಾಯಕರು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತರಲು ಯಾವ ನಾರಿ ಶಕ್ತಿ ಅಡ್ಡ ಬಂದಿದೆ ಒಮ್ಮೆ ಜನರಿಗೆ ಹೇಳುವ ಧೈರ್ಯ ಮಾಡಿ.
ಮಹಿಳೆಯರಿಗೆ ಗೌರವ ನೀಡುವ, ಸ್ಥಾನಮಾನ ಕೊಡುವ, ಸ್ವಾಭಿಮಾನದ ಬದುಕಿಗೆ ಅರ್ಥ ನೀಡುವ ಯಾವ ಮಾನದಂಡವೂ ಬಿಜೆಪಿಯ ಡಿಎನ್ಎ ಅಲ್ಲೇ ಇಲ್ಲ. ಅಷ್ಟಕ್ಕೂ ರಾಮ-ಪರಶುರಾಮನ ಮೂರ್ತಿ ಪ್ರತಿಷ್ಠಾಪನೆ ಮಾಡಿ ಅಮಾಯಕ ಜನರ ತೆರಿಗೆ ಹಣವನ್ನು ಜೇಬಿಗೆ ಇಳಿಸಿಕೊಂಡಂತೆ ಸುಲಭವಲ್ಲ ನಾರಿ ಶಕ್ತಿ ಬಗ್ಗೆ ಮಾತಾಡುವುದು. ಕರಾವಳಿಯ ಬಿಜೆಪಿ ಯುವಕರ ಪಟಾಲಂ ಮಹಿಳೆಯರನ್ನ, ಯುವತಿಯರನ್ನ ಯಾಮಾರಿಸಿ ಅತ್ಯಾಚಾರ ನಡೆಸಿ ಮೋಸ ಮಾಡುತ್ತಿರುವುದರ ವಿರುದ್ಧ ತುಟಿ ಬಿಚ್ಚದ ನಿಮಿಗೆ ಅದ್ಯಾವ ನಾರಿ ಶಕ್ತಿ, ನಾರಿ ತತ್ವದ ಬಗ್ಗೆ ಮಾತಾಡುವ ನೈತಿಕತೆ ಇದೆ?
– ಬಿ ಕೆ ಹರಿಪ್ರಸಾದ್, ವಿಧಾನ ಪರಿಷತ್ ಸದಸ್ಯ




