ಸ್ವಾಮಿ ಸಚಿವ @thekjgeorge ಅವರೇ, ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ತಿಂಗಳ ಸಂಬಳ ಅಲ್ವಲ್ಲ ಅಂತ ಹೇಳಿದ್ದೀರಲ್ಲಾ, ಇದೇನಾ ಮತದಾರರಿಗೆ ನೀವು ಕೊಡುವ ಗೌರವ?
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಗೃಹಲಕ್ಷ್ಮಿ ಹಣ ಕೊಡಿ, ಅನ್ನಭಾಗ್ಯದ ಹಣ ಕೊಡಿ ಅಂತ ಮತದಾರರೇನು ನಿಮ್ಮ ಬಳಿ ಭಿಕ್ಷೆ ಬೇಡುತ್ತಿಲ್ಲ. ಈ ಗ್ಯಾರೆಂಟಿ ಯೋಜನೆಗಳನ್ನು ಪ್ರಾರಂಭಿಸಿ ಅಂತ ಜನತೆ ಕೇಳಿಯೂ ಇರಲಿಲ್ಲ.
ನಿಮ್ಮ ಕಾಂಗ್ರೆಸ್ ಪಕ್ಷದ ಅಧಿಕಾರದ ತೆವಲಿಗೆ ಬೇಕಾಬಿಟ್ಟಿ ಗ್ಯಾರೆಂಟಿ ಯೋಜನೆಗಳನ್ನು ಘೋಷಣೆ ಮಾಡಿ ಈಗ ಮತದಾರರ ಬಗ್ಗೆ ಕೀಳಾಗಿ ಯಾಕೆ ಮಾತಾಡುತ್ತೀರಿ? ನಿಮ್ಮ ಕೈಲಾದರೆ ಕೊಟ್ಟ ಮಾತಿನಂತೆ ಗ್ಯಾರೆಂಟಿ ಯೋಜನೆಗಳನ್ನು ಗೌರವದಿಂದ ಜಾರಿ ಮಾಡಿ. ನಿಮ್ಮ ಕೈಲಾಗದಿದ್ದರೆ ಬಿಟ್ಟುಬಿಡಿ. ಗ್ಯಾರೆಂಟಿ ಯೋಜನೆಗಳು ಜಾರಿ ಆಗುವ ಮುನ್ನವೂ ಜನರು ತಮ್ಮ ಬದುಕು ಕಟ್ಟಿಕೊಂಡಿದ್ದರು. ಅವು ಇಲ್ಲದೆಯೂ ತಮ್ಮ ಬದುಕು ಕಟ್ಟಿಕೊಳ್ಳುತ್ತಾರೆ. ಕಾಂಗ್ರೆಸ್ ಕೋಳಿ ಕೂಗಿದರೆ ಕರ್ನಾಟಕದಲ್ಲಿ ಬೆಳಕು ಹರಿಯುತ್ತದೆ ಎನ್ನುವ ದುಸ್ಥಿತಿ ಕನ್ನಡಿಗರಿಗೆ ಬಂದಿಲ್ಲ.
ಕನ್ನಡಿಗರ ಸ್ವಾಭಿಮಾನ ಕೆಣಕಬೇಡಿ. ಈಗಾಗಲೇ ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಅಡ್ರೆಸ್ ಇಲ್ಲದಂತಾಗಿದೆ. ಕನ್ನಡಿಗರ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದರೆ ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷ ನಿರ್ನಾಮ ಆಗುವುದು ಗ್ಯಾರೆಂಟಿ.
– ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ




