ಬೆಂಗಳೂರು: ಮುಖ್ಯಮಂತ್ರಿಗಳು ಈ ಪ್ರಕರಣದಲ್ಲಿ ತಪ್ಪು ಮಾಡಿಲ್ಲ ಎಂದರೆ ತನಿಖೆಗೆ ಹೆದರುವುದು ಏಕೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದರು.
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ಸಲ್ಲಿಕೆಯಾದ ಮನವಿಯ ಬಗ್ಗೆ ರಾಜ್ಯಪಾಲರು ಸ್ಪಷ್ಟನೆ ಕೇಳಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದಾರೆ. ಅದಕ್ಕೆ ಉತ್ತರ ನೀಡುವುದು ಅವರ ಜವಾಬ್ದಾರಿಯಾಗಿದೆ. ಅದನ್ನು ಬಿಟ್ಟು ಸಂಪುಟ ಸಭೆಯಲ್ಲಿ ನೋಟಿಸ್ ವಾಪಸ್ ಪಡೆಯುವಂತೆ ಆಗ್ರಹಿಸುವ ತೀರ್ಮಾನ ಕೈಗೊಂಡಿದ್ದಾರೆ. ಇದು ಅಕ್ಷಮ್ಯ ಎಂದರು.
ಮುಖ್ಯಮಂತ್ರಿಗಳು ಈ ಪ್ರಕರಣದಲ್ಲಿ ಯಾವುದೇ ತಪ್ಪು ಮಾಡಿಲ್ಲ ಎಂದರೆ ತನಿಖೆಗೆ ಯಾಕೆ ಹೆದರಬೇಕು? ಯಾವುದೇ ರೀತಿಯಾದ ತನಿಖೆ ನಡೆಯಲಿ ಎಂದು ಅದನ್ನು ಎದುರಿಸಲು ಸಿದ್ಧರಾಗಬೇಕಿದೆ. ತನಿಖೆ ಪೂರ್ಣಗೊಳ್ಳುವವರೆಗೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಗೆ ಇರಬೇಕು. ತನಿಖೆಯಲ್ಲಿ ಅವರು ನಿರಪರಾಧಿ ಎಂದು ಸಾಬೀತಾದರೆ ಮತ್ತೆ ಮುಖ್ಯಮಂತ್ರಿಯಾಗಲಿ ಎಂದರು.
ಮತ್ತೊಂದೆಡೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಪ್ಪು ಮಾಡಿರುವುದು ಸಾಬೀತಾಗಿದೆ. ಹೀಗಾಗಿಯೇ ತಮ್ಮ ಸಂಪುಟ ಸಹೋದ್ಯೋಗಿಗಳನ್ನು ಬಳಸಿಕೊಂಡು ತಪ್ಪಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಮುಖ್ಯಮಂತ್ರಿಗಳ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಿರುವ ಮನವಿಗೆ ರಾಜ್ಯಪಾಲರು ಸ್ಪಷ್ಟನೆ ಕೇಳಿದ್ದಾರೆ. ಇದಕ್ಕೆ ಅಗತ್ಯವಿರುವ ಉತ್ತರ ಕೊಡಬೇಕು. ಅದನ್ನು ಬಿಟ್ಟು ರಾಜ್ಯಪಾಲರು ನೀಡಿರುವ ಪತ್ರವನ್ನೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸುವ ಮೂಲಕ ರಾಜ್ಯ ಸರ್ಕಾರ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದರು.




