ಮೈಸೂರು: ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ ಎಂಬ ಬಿಜೆಪಿ ಆರೋಪ ಹಾಸ್ಯಾಸ್ಪದ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
- ಕಾಮಗಾರಿ ಬಿಲ್ ಪಾವತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ : ಕೃಷ್ಣ ಬೈರೇಗೌಡ
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಬಿಜೆಪಿ ಮಾತ್ರ ಏಕೆ ಇದನ್ನು ವಿರೋಧಿಸುತ್ತದೆ? ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ಭಯಪಡಬೇಕು? ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಪ್ರಶ್ನಿಸಿದರು.
ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ? ಶಾಂತಿ ಹಾಗೂ ಭ್ರಾತೃತ್ವ ಕಾಪಾಡಲು ಈ ಮಸೂದೆ ಜಾರಿ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸಲೆಂದು ಮಸೂದೆ ರೂಪಿಸಿದ್ದೇವೆ. ಬಿಜೆಪಿ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವುದು ಅವರು ದ್ವೇಷ ಭಾಷಣ ಮಾಡುತ್ತಾರೆ ಎಂಬ ಕಾರಣಕ್ಕಾಗಿಯೇ ಎಂದರು.
ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ: ಫೆಬ್ರವರಿ – ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು. 23 ತಿಂಗಳ ಗೃಹಲಕ್ಷ್ಮಿ ಹಣವನ್ನು ಸರ್ಕಾರದ ಬಳಿ ಹಣವಿಲ್ಲದೆ ಕೊಡಲು ಸಾಧ್ಯವಾಗುತ್ತಿತ್ತೇ? ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಎಲ್ಲಿಂದ ಉದ್ಭವವಾಗುತ್ತದೆ? ಹಣವನ್ನು ಯಾರು ತೆಗೆದುಕೊಳ್ಳಲಾಗುವುದಿಲ್ಲ, ಹಣ ಇನ್ನು ಬಿಡುಗಡೆಯಾಗಿಲ್ಲ ಅಷ್ಟೆ ಎಂದರು.




