ಬೆಂಗಳೂರು: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಪೊಲೀಸ್ ಮೇಲೆ ಹಲ್ಲೆ ಲ್ಲೆ ಮಾಡಲು ಮುಂದಾದ ಸಿಎಂ ಸಿದ್ದರಾಮಯ್ಯ ಅವರ ಮೇಲೆ ರೌಡಿ ಶೀಟರ್ ಏಕೆ ತೆರೆಯಬಾರದು ಎಂದು ಪ್ರಶ್ನಿಸಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದು, ಮುಖ್ಯಮಂತ್ರಿ ಕುರ್ಚಿಯ ವ್ಯಾಲಿಡಿಟಿ ಅಂತ್ಯವಾಗುವ ಸಮಯ ಸಮೀಪಿಸುತ್ತಿದ್ದಂತೆಯೇ ಮುಖ್ಯಮಂತ್ರಿ ಅವರಿಗೆ ಹತಾಶೆ ಬಹುವಾಗಿ ಕಾಡುತ್ತಿದೆ. ಸಾರ್ವಜನಿಕ ಜೀವನದಲ್ಲಿದ್ದೇನೆ ಎಂಬ ಪರಿಜ್ಞಾನವೂ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ ಎಂದಿದೆ.
ಮನೆಮಂದಿಯ ಮೇಲೆ ರೇಗಾಡುವ ಹಾಗೆ ಸರ್ಕಾರಿ ಅಧಿಕಾರಿಗಳ ಮೇಲೆ ರೇಗಾಡುತ್ತಿದ್ದಾರೆ. ಪೊಲೀಸ್ ಅಧಿಕಾರಿಯ ಮೇಲೆ ಕೈ ಎತ್ತುತ್ತಿದ್ದಾರೆ. ಮಹಿಳೆಯರೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದಿದೆ.
ದರ್ಪದಿಂದ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆದುಕೊಳ್ಳುತ್ತಿರುವುದು ಮುಖ್ಯಮಂತ್ರಿ ಕುರ್ಚಿಗೆ ಮಾಡುತ್ತಿರುವ ಅವಮಾನವಾಗಿದೆ. ಸಿಎಂ ಅವರೇ, ನಿಮ್ಮ ಗೂಂಡಾಗಿರಿಗೆ ಕೊನೆಯೆಂದು? ನಿಮ್ಮ ಮೇಲೆ ರೌಡಿ ಶೀಟರ್ ಏಕೆ ತೆರೆಯಬಾರದು? ಎಂದು ಕೇಳಿದೆ.




