ಬೆಂಗಳೂರು: ಪ್ರತಿ ಬಾರಿಯೂ ನಮ್ಮ ಸರ್ಕಾರವನ್ನು ಅದರಲ್ಲಿಯೂ ಸಾರಿಗೆ ಇಲಾಖೆಯ ಸಚಿವನಾದ ನನ್ನ ಕಾರ್ಯವೈಖರಿಯನ್ನು ಇಷ್ಟೊಂದು ಅಚ್ಚುಕಟ್ಟಾಗಿ ವಿಮರ್ಶಿಸಿ, ದಕ್ಷ ಸಚಿವನೆಂದು ಬಿರುದು ಕೊಟ್ಟಿರುವ BJP Karnatakaದ ಸ್ವಯಂ ಘೋಷಿತ ದಕ್ಷ ನಾಯಕರುಗಳಿಗೆ ಧನ್ಯವಾದಗಳು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸಾರಿಗೆ ಇಲಾಖೆ ಕುರಿತು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ನಡೆಸಿದ್ದ ಅಭಿಯಾನಕ್ಕೆ ಸಾಮಾಜಿಕ ಜಾಲತಾಣಗಳಲ್ಲೇ ಪ್ರತಿಕ್ರಿಯೆ ನೀಡಿರುವ ರಾಮಲಿಂಗಾರೆಡ್ಡಿ, ಸ್ವಯಂ ಘೋಷಿತ ನಾಯಕರುಗಳ ಗಮನಕ್ಕೆ ತರಲೇಬೇಕಾದ ಹಾಗೂ ಅವರ ಅವಧಿಯ ಕರ್ಮ ಕಾಂಡಗಳನ್ನು ತೆರೆದಿಡುವ ಅನಿವಾರ್ಯ ಪರಿಸ್ಥಿತಿಯನ್ನು ಅವರೇ ನಿರ್ಮಿಸಿಕೊಡುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸುತ್ತಾ, ಕಳೆದ 5 ವರುಷಗಳಲ್ಲಿ ಹೊಸ ಬಸ್ಸುಗಳ ಸೇರ್ಪಡೆಯಾಗಿಲ್ಲ. ಈಗಿರುವ ಬಸ್ಸುಗಳ ಸ್ಥಿತಿಗೆ ತಾವೇ ಕಾರಣ ಎಂಬುದನ್ನು ಪದೇ ಪದೇ ತಮಗೆ ತಿಳಿಸಿ ಹೇಳಬೇಕಾಗಿದೆ ಎಂದಿದ್ದಾರೆ.
ನಿಗಮದಲ್ಲಿ 2600 ತಾಂತ್ರಿಕ ಸಿಬ್ಬಂದಿಗಳ ತೀವ್ರ ಕೊರತೆ ಇದೆ. ನಮ್ಮ ಸರ್ಕಾರ ಕಳೆದ 5 ತಿಂಗಳ ಹಿಂದೆ 250 ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಮಾಡಿದೆ. ಬಸ್ಸುಗಳ ಸಮರ್ಪಕ ನಿರ್ವಹಣೆಗೆ ತಾಂತ್ರಿಕ ಸಿಬ್ಬಂದಿಯಿಲ್ಲದೆ ಸಂಸ್ಥೆಗಳು ತತ್ತರಿಸುತ್ತಿವೆ.ಹಳೆಯ 970 ಬಸ್ಸುಗಳನ್ನು ಪುನಶ್ಚೇತನ ಕಾರ್ಯಕೈಗೊಂಡು ನವೀಕರಿಸಲಾಗಿದೆ ಎಂದಿದ್ದಾರೆ.
ಬಿ.ಜೆ.ಪಿಯ ಸ್ವಯಂ ಘೋಷಿತ ದಕ್ಷ ಮುಖ್ಯಮಂತ್ರಿಗಳ ಹಾಗೂ ಸಾರಿಗೆ ಮಂತ್ರಿಗಳ ಅದಕ್ಷ ಕ್ರಮಗಳಿಂದಾಗಿ ಸಾರಿಗೆ ಸಂಸ್ಥೆಗಳ ಮೇಲೆ ರೂ.5900 ಕೋಟಿ ಸಾಲದ ಹೊರೆಯಿದ್ದ ಕಾರಣ, ಬಸ್ಸುಗಳ ನಿರ್ವಹಣೆಗೂ ಆರ್ಥಿಕ ಕೊರತೆಯಾಗಿ ಸಂಸ್ಥೆಗಳು ಕಷ್ಟಕರ ಸ್ಥಿತಿಯಲ್ಲಿದ್ದವು ಎಂದಿದ್ದಾರೆ.
ನಮ್ಮ ಸರ್ಕಾರ ಬಂದೊಡನೆ 5800 ಹೊಸ ಬಸ್ಸುಗಳ ಸೇರ್ಪಡೆಗೆ ಚಾಲನೆ ನೀಡಿದೆ. ಕಳೆದ ಒಂದು ವರುಷದ ಅವಧಿಯಲ್ಲಿ ನಾಲ್ಕು ನಿಗಮಗಳಲ್ಲಿ 2236ಕ್ಕೂ ಹೆಚ್ಚು ಹೊಸ ಬಸ್ಸುಗಳ ಸೇರ್ಪಡೆಯಾಗಿವೆ. 13999 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಬಿ.ಜೆ.ಪಿಯ ಅವಧಿಯಲ್ಲಿ ಸಾರಿಗೆ ಸಿಬ್ಬಂದಿಗಳಿಗೆ ಅರ್ಧ ವೇತನ, ಇಡೀ ತಿಂಗಳ ಪೂರ್ಣ ವೇತನ ನೀಡಲಾಗುತ್ತಿತ್ತು. ನಿಗದಿತ ದಿನಾಂಕವೇ ವೇತನಕ್ಕೆ ನಿಗದಿಪಡಿಸಿರಲಿಲ್ಲ, ನಮ್ಮ ಸರ್ಕಾರ ಬಂದ ಮೇಲೆ ಕೆ ಎಸ್ ಆರ್ ಟಿ ಸಿ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳಲ್ಲಿ ತಿಂಗಳ ಮೊದಲ ದಿನವೇ ವೇತನ ಪಾವತಿ ಹಾಗೂ ಇತರೇ ಎರಡು ನಿಗಮಗಳಲ್ಲಿ 7ನೇ ತಾರೀಖಿನಂದು ಪಾವತಿಯಾಗುತ್ತಿದೆ ಎಂದಿದ್ದಾರೆ.
ಬಿ.ಜೆ.ಪಿ ಆಡಳಿತ ನಡೆಸುತ್ತಿರುವ ಉತ್ತರ ಭಾರತದ ರಾಜ್ಯಗಳಲ್ಲಿನ ಸಾರಿಗೆ ಸಂಸ್ಥೆಗಳು ನಮ್ಮಲ್ಲಿಗೆ ಭೇಟಿ ನೀಡುತ್ತಿರುವುದೇ, ನಾವು ಪ್ರಗತಿಯ ಪಥದಲ್ಲಿ ಸಾರಿಗೆ ಸಂಸ್ಥೆಗಳನ್ನು ಕೊಂಡ್ಯೊಯುತ್ತಿದ್ದೇವೆ ಎನ್ನುವುದಕ್ಕೆ ಸಾಕ್ಷಿ ಎಂದಿದ್ದಾರೆ.
ಇಷ್ಟೊಂದು ಸಮಸ್ಯೆಗಳ ಆಗರವೇ ಮೈಎತ್ತಿ ನಿಂತಿರುವಾಗ, ಒಂದು ವರ್ಷದ ಅವಧಿಯಲ್ಲಿಯೇ ಎಲ್ಲವನ್ನು ನಾನು ಸರಿಪಡಿಸಿಬಿಡುತ್ತೇನೆ ಎಂದು ಬುರುಡೆ ಬಿಡಲು ನಾನೇನು ಬಿ.ಜೆ.ಪಿ ಯ ಸ್ವಯಂಘೋಷಿತ ದಕ್ಷ ಮುಖ್ಯಮಂತ್ರಿಯೇ, ಸಾರಿಗೆ ಸಚಿವನೇ? ಎಂದು ಕೇಳಿದ್ದಾರೆ.
ಜಿ.ಜೆ.ಪಿಯ ಅದಕ್ಷ ಆಡಳಿತ ಪರಾಮಾವಧಿಯನ್ನು ಸರಿಪಡಿಸಲು ಕನಿಷ್ಠ 5 ವರುಷಗಳಾದರೂ ಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಬಿ.ಜೆ.ಪಿಯ ಕೇಂದ್ರ ಸರ್ಕಾರದ ಯೋಜನೆಯಡಿ ಎಲೆಕ್ಟ್ರಿಕ್ ಬಸ್ಸುಗಳನ್ನು ಕಾರ್ಯಾಚರಣೆ ಮಾಡುವ ಹೊಣೆ ನಮ್ಮದು. ಆದರೆ ಚಾಲಕ ಖಾಸಗಿಯವರು, ಸಬ್ಸಿಡಿ ಖಾಸಗಿಯವರಿಗೆ ನೀಡುವುದು. ಈ ರೀತಿಯ ಯೋಜನೆಗಳಿಂದ ಸಾರಿಗೆ ಸಂಸ್ಥೆಗಳು ಅಡಕತ್ತರಿಯಲ್ಲಿ ಸಿಲುಕಿವೆ ಎಂದಿದ್ದಾರೆ.
ಖಾಸಗಿಯವರು ಚಾಲಕರಿಗೆ ವೇತನ ನೀಡದೇ ಇದ್ದರೆ, ಬಿ.ಜೆ.ಪಿಯ ಸ್ವಯಂ ಘೋಷಿತ ದಕ್ಷ ನಾಯಕರುಗಳು ನಮ್ಮನ್ನು ಟೀಕಿಸುತ್ತಾರೆ. ಕೇಂದ್ರ ಸರ್ಕಾರದ ಯೋಜನೆಗಳ ದ್ವಂದ್ವತೆಯನ್ನು ಪ್ರಶ್ನಿಸುವ ಶೂರತ್ವ ಈ ದಕ್ಷ ನಾಯಕರುಗಳಿಗೆ ಎಲ್ಲಿ ಅಡಗಿರುತ್ತದೆ ಎಂದು ಪ್ರಶ್ನಿಸಿದ್ದಾರೆ.
ಸಾರಿಗೆ ಸಂಸ್ಥೆಗಳ ಖಾಸಗೀಕರಣ ಯಾಕೆ? ಖಾಸಗಿ ಚಾಲಕರು ಯಾಕೆ? ಖಾಸಗಿ ಸಂಸ್ಥೆಯವರಿಗೆ ಯಾಕೆ ಸಬ್ಸಡಿ ನೀಡುತ್ತೀರಾ? ಎಂದು ಸನ್ಮಾನ್ಯ ಪ್ರಧಾನಿಗಳಾದ Narendra Modi ಯನ್ನು ಪ್ರಶ್ನಿಸಲಾಗುವುದಿಲ್ಲವೇ? ಎಂದಿದ್ದಾರೆ.
ಸ್ವಯಂಘೋಷಿತ ದಕ್ಷ ನಾಯಕರು ಟ್ಟೀಟ್ ಗಳಿಗಷ್ಟೇ ಸೀಮಿತ ..ಇವರ ದಕ್ಷತೆಗೆ ನನ್ನ ಅನುಕಂಪವಿದೆ. ಇನ್ನಾದರೂ ನಿಲ್ಲಲಿ.. ಸ್ವಯಂ ಘೋಷಿತ ಟ್ಟೀಟ್ ನಾಯಕರ ಎಲುಬಿಲ್ಲದ ನಾಲಗೆ ಎಂದಿದ್ದಾರೆ.




