ಮೈಸೂರು: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು, ಪ್ರಧಾನಿ ಆಗಿ 11 ವರ್ಷ ಕಳೆದಿದೆ. ವಾಜಪೇಯಿ ಸಹ ಆರು ವರ್ಷ ಪಿ.ಎಂ. ಆಗಿದ್ದರು. ಹೀಗಿದ್ದು ಬಿಜೆಪಿ ಆಡಳಿತದಲ್ಲಿ ಯಾಕೆ ಜನಸಂಖ್ಯೆಗೆ ಅನುಗುಣವಾಗಿ ಎಸ್.ಸಿ ಎಸ್ಟಿ, ಟಿಎಸ್‌ಪಿ ಅನುದಾನ ಖರ್ಚು ಮಾಡಿಲ್ಲ?’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಮೈಸೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಕೆ. ಶಿವಕುಮಾರ್ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಬಡ್ತಿಯಲ್ಲಿ ಮೀಸಲಾತಿಗೆ ಸಂಬಂಧಿಸಿ ರತ್ನಪ್ರಭಾ ನೇತೃತ್ವದಲ್ಲಿ ಸಮಿತಿ ರಚಿಸಿ, ಅದರ ಶಿಫಾರಸಿನಂತೆ ವರದಿ ಜಾರಿ ಮಾಡಿದ್ದು ನಮ್ಮ ಸರ್ಕಾರ. ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿ ಏಕೆ ಈ ಕೆಲಸ ಆಗಿಲ್ಲ’ ಎಂದು ಹೇಳಿದರು.
ಕೇಂದ್ರ ಎಂಟು ವರ್ಷ ಜಿಎಸ್‌ಟಿ ಹಣ ಮಜಾ ಮಾಡಿ ಈಗ ಕಡಿತಗೊಳಿಸಿದೆ. ರಾಜ್ಯಕ್ಕೆ 6 ಸಾವಿರ ಕೋಟಿ ಆದಾಯ ಕಡಿಮೆ ಆಗಿದೆ ಎಂದರು.
ಕಳೆದ 20 ವರ್ಷದಿಂದ ನರೇಗಾ ಅನುದಾನವನ್ನು ಕೇಂದ್ರವೇ ಕೊಡುತ್ತಿತ್ತು. ಈಗ ರಾಜ್ಯವೂ ಶೇ 40ರಷ್ಟು ಪಾಲು ಭರಿಸುವಂತೆ ಹೇಳಿದ್ದಾರೆ. ಆರ್ಥಿಕ ವರ್ಷದ ಮಧ್ಯದಲ್ಲಿ ಈ ಘೋಷಣೆ ಮಾಡಿದ್ದು, ಇದರಿಂದ ರಾಜ್ಯ ಸರ್ಕಾರಕ್ಕೆ 2500 ಕೋಟಿ ರೂಪಾಯಿ ನಷ್ಟ ಆಗಲಿದೆ. ಈ ಬಗ್ಗೆ ಪ್ರಧಾನಿಗೆ ಈಗಾಗಲೇ ಪತ್ರ ಬರೆದಿದ್ದೇನೆ ಎಂದರು.
ಬ್ಯಾಗ್ ಲಾಗ್ ಹುದ್ದೆ ಭರ್ತಿ ಸಂಬಂಧ ಮಹದೇವಪ್ಪ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದು, ಆ ಸಮಿತಿ ವರದಿ ಸಲ್ಲಿಸಿದ ಕೂಡಲೆ ಅದನ್ನು ಪರಿಶೀಲಿಸಿ ಖಾಲಿ ಇರುವ ಎಲ್ಲಾ ಬ್ಯಾಕ್ ಲಾಗ್ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡುತ್ತೇವೆ ಎಂದರು.
ಮೈಸೂರು ವಿ.ವಿ.ಗೆ ನಿವೃತ್ತ ಸಿಬ್ಬಂದಿಗೆ ವೇತನ ನೀಡಲು ಹಣ ಬಿಡುಗಡೆ ಮಾಡಲಾಗಿದೆ. ಈ ದುಃಸ್ಥಿತಿಗೆ ಹಿಂದಿನ ಕುಲಪತಿಗಳು ಕಾರಣ. ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು.




