ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮದಿಂದ ರಾಜ್ಯದ ಒಳನಾಡಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಚಾಮರಾಜನಗರ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ, ಬೆಳಗಾವಿ ಗಳಲ್ಲಿ ಭಾರಿ ಮಳೆಯಾಗುತ್ತಿದೆ.
ಈ ಭಾಗಗಳಲ್ಲಿ ಹವಾಮಾನ ಇಲಾಖೆ ಮಂಗಳವಾರದಿಂದ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಿದೆ. ಜೊತೆಗೆ ಅ.17 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



